ಚಾಮರಾಜನಗರ

ಚಿರತೆ ಆತಂಕದ ನಡುವೆ ಈಗ ಕಾಡಾನೆ ಭೀತಿ: ಹಲಸಿನ ಆಸೆಗೆ ಗಜಪಡೆ ಲಗ್ಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ಹಾಗೂ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಾಲಕನ ಬಲಿ ಪಡೆದ ಚಿರತೆ ಒಂದೆಡೆಯಾದರೇ ಮಾವು, ಹಲಸಿನ ಆಸೆಗೆ ಗ್ರಾಮಗಳತ್ತ ಬರುತ್ತಿರುವ ಕಾಡಾನೆಗಳ ಭೀತಿ ಮತ್ತೊಂದೆಡೆಯಾಗಿದೆ.

ಮಲೆ ಮಹದೇಶ್ವರ ಬೆಟ್ಟ ಗ್ರಾ.ಪಂ ವ್ಯಾಪ್ತಿಯ ಇಂಡಿಗನತ್ತ ಸುತ್ತಮುತ್ತ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದೆ. ಈ ಬೆನ್ನಲ್ಲೇ ಹಲಸು ಮತ್ತು ಮಾವಿನ ಆಸೆಗೆ ಇಂಡಿಗನತ್ತ ಗ್ರಾಮಕ್ಕೆ ಕಾಡಾನೆಗಳು ಲಗ್ಗೆ ಇಡುತ್ತಿವೆ. ಇಂಡಿಗನತ್ತವು ಅರಣ್ಯ ಪ್ರದೇಶದೊಳಗಿನ ಗ್ರಾಮವಾಗಿದ್ದು, ಚಿರತೆ ಆತಂಕ ಒಂದೆಡೆಯಾದರೇ ಕಾಡಾನೆ ಭೀತಿ ಮತ್ತೊಂದೆಡೆಯಾಗಿದೆ.

ಬಾಲಕ ಮೃತಪಟ್ಟ ಬಳಿಕ ಅಲ್ಲಿನ ಗ್ರಾಮದ ಜನರು ಮನೆಯಿಂದ ಹೊರಬರಲಾರದಷ್ಟು ಭಯಭೀತರಾಗಿದ್ದಾರೆ. ಇದರೊಟ್ಟಿಗೆ ಕಳೆದ ಎರಡು ದಿನಗಳಿಂದ ಗ್ರಾಮದಲ್ಲಿ ಕಾಡಾನೆ ಹಾವಳಿಯೂ ಹೆಚ್ಚಾಗಿದೆ.

ಗ್ರಾಮದ ಸಿದ್ದರಾಜು ಎಂಬುವವರ ಮನೆ ಬಳಿ ಇರುವ ಹಲಸಿನ ಮರದಲ್ಲಿ ಹಣ್ಣುಗಳನ್ನು ತಿನ್ನಲು ಇಡೀ ರಾತ್ರಿ ಆನೆ ಬೀಡುಬಿಟ್ಟಿದ್ದರಿಂದ ಗ್ರಾಮಸ್ಥರು ಮತ್ತಷ್ಟು ಚಿಂತೆಗೀಡಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

14 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago