ಹನೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ. ಇಂಥ ಗೂಂಡಾನನ್ನು ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು, ದೇಶದ ಕಾನೂನು ವ್ಯವಸ್ಥೆಯನ್ನು ಇವರ ಕೈಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಗುರುವಾರ ( ಮಾರ್ಚ್ 28 ) ತೀವ್ರ ವಾಗ್ದಾಳಿ ನಡೆಸಿದರು.
ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ರು ಮಾಡಿದ್ರ? ಕಪ್ಪು ಹಣ ತರುತ್ತೇನೆ ಅಂದ್ರು ತಂದ್ರ? ಎಂದು ವಾಗ್ದಾಳಿ ನಡೆಸಿದರು.
ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಹೇಳುತ್ತಿದ್ದಾರೆ. ಅಷ್ಟು ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಮಾಡುವುದೇ ಇವರ ರಹಸ್ಯ ಕಾರ್ಯಸೂಚಿ. ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ ಮೋದಿ ಸರ್ಕಾರ ಎಂದು ಟೀಕಿಸಿದರು.





