ಚಾಮರಾಜನಗರ

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ ಹೆಚ್ಚು ಆರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಗುರುವಾರ ಮಧ್ಯಾಹ್ನ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಲೇ ಎಕರೆಗಟ್ಟಲೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.

ಅರಣ್ಯಕ್ಕೆ ಬೆಂಕಿ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆ ವಲಯ ಅರಣ್ಯ ಅಧಿಕಾರಿ ವಾಸು ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತ್ವರಿತವಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ವಾರ ಬಿ.ಆರ್.ಟಿ ವಲಯ ವ್ಯಾಪ್ತಿಯ ಬೈಲೂರು ಅರಣ್ಯ ಪ್ರದೇಶದಲ್ಲಿ 80 ಹೆಚ್ಚು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು.

ಇದೀಗ ಮತ್ತೆ ಬಿ.ಆರ್.ಟಿ ವಲಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇದು ಕಿಡಿಗೇಡಿಗಳು ಹಾಕಿರುವ ಬೆಂಕಿಯೋ ಅಥವಾ ಕಾಡ್ಗಿಚ್ಚಿಗೆ ಬಿದ್ದಿರುವ ಬೆಂಕಿಯೋ ಎಂಬ ಅನುಮಾನ ಕಾಡುತ್ತಿದೆ. ಒಟ್ಟಾರೆ ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯಕ್ಕೆ ಬೆಂಕಿ ಬೀಳದಂತೆ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

13 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

13 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago