ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
ಬುಧವಾರ ಮಧ್ಯಾಹ್ನ ಹಾವಿನ ಮೂಲೆ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಲೇ ಎಕರೆಗಟ್ಟಲೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.
ಅರಣ್ಯಕ್ಕೆ ಬೆಂಕಿ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ತ್ವರಿತವಾಗಿ ಬೆಂಕಿ ನಂದಿಸುವಲ್ಲಿ ಕಾರ್ಯ ನಿರತರಾಗಿದ್ದಾರೆ.
ಕಳೆದ 15 ದಿನಗಳ ಅವಧಿಯಲ್ಲಿ ಬಿಆರ್‌ಟಿ ಅರಣ್ಯದಲ್ಲಿ ಎರಡು ಬಾರಿ ಅರಣ್ಯಕ್ಕೆ ಬೆಂಕಿ ಬಿದ್ದಿದೆ, ಇದೀಗ ಅರಣ್ಯ ಮಧ್ಯಭಾಗದಲ್ಲಿರುವ ಜೋಳದ ಕಡ್ಡಿಗೆ ಬೆಂಕಿ ಹಾಕಿರುವ ಪರಿಣಾಮ ಗಾಳಿಗೆ ಅರಣ್ಯದ ಸ್ವಲ್ಪ ಭಾಗ ಸುಟ್ಟು ಹೋಗಿದೆ.
ಬಿಆರ್‌ಟಿ ವಲಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯಕ್ಕೆ ಬೆಂಕಿ ಬೀಳದಂತೆ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…