ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ.
ಐದು ವರ್ಷದ ಹೆಣ್ಣು ಹುಲಿಯ ಕಳೇಬರ ಗುಂಡ್ರೆ ಅರಣ್ಯದಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಹುಲಿಯ ಮೃತದೇಹ ಕಂಡುಬಂದಿದೆ.
ಹುಲಿ ಸಹಜವಾಗಿ ಸಾವನ್ನಪ್ಪಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





