Mysore
16
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಿಸಿ : ಗಡಿಜಿಲ್ಲೆಯಲ್ಲಿ ಪೋಷಕರಿಂದ ಪ್ರತಿಭಟನೆ

ಚಾಮರಾಜನಗರ : ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು.

ಶಾಲೆಯಲ್ಲಿ ಕಾಯಂ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಶಿಕ್ಷಣ ಇಲಾಖೆ ಶಿಕ್ಷಕರನ್ನು ನೇಮಕ ಮಾಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ನೇಮಕ ಮಾಡುತ್ತಿಲ್ಲ. ಇದರಿಂದ ಶಾಲೆಯಲ್ಲಿ  ಖಾಯಂ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಒಬ್ಬರು,  ಇಬ್ಬರು ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.  ಅದರಲ್ಲಿ ಒಬ್ಬರು ಗೈರಾಗಿದ್ದಾರೆ. ಎಲ್ ಕೆಜಿ  ತರಗತಿಯಿಂದ 7 ರವರೆಗೆ  ಒಟ್ಟು 300 ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆಯಾಗಿದೆ ಕಾಯಂ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಪೋಷಕರು ಆಗ್ರಹಿಸಿದರು.

ಶಾಲೆಯಲ್ಲಿ ಮಕ್ಕಳ ವ್ಯಾಸಂಗಕ್ಕೆ ಸಾಕಷ್ಟು ತೊಂದರೆಯಾಗಿದೆ. ಇದರಿಂದ ಮಕ್ಕಳಿಗೆ ಅನ್ಯಾಯವಾಗಿದೆ. ಇಲಾಖೆಯ ಅಧಿಕಾರಿಗಳು ಕೂಡಲೇ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು  ಪ್ರತಿಭಟನಾನಿರತರು ಪಟ್ಟು ಹಿಡಿದರು. ಇದಕ್ಕೆ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಪ್ರತಿಕ್ರಿಯಿಸಿ ಕೂಡಲೇ 2  ಶಿಕ್ಷಕರನ್ನು ನೇಮಕ ಮಾಡಲಾಗುವುದು. ಡಿಡಿಪಿಐ ಅವರೊಂದಿಗೆ ಚರ್ಚಿಸಿ ಶಿಕ್ಷಕರ ಕೊರತೆಯನ್ನು ಸರಿಪಡಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಮೇಲೆ ಪೋಷಕರ ಪ್ರತಿಭಟನೆ ಕೈ ಬಿಟ್ಟು ಶಾಲೆಗೆ ಮಕ್ಕಳನ್ನು ಕಳುಹಿಸಿದರು.

ಪ್ರತಿಭಟನೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯ ಬಿಬಿಖುತೇಜ, ಪೋಷಕರಾದ ಪ್ರವೀಣ್, ಮನು, ತ್ಯಾಗರಾಜ, ಖಲೀಂವುಲ್ಲಾ, ಮಹೇಶ್, ಮಾದೇಶ್, ಜ್ಯೋತಿ ಹಾಗೂ ಮಕ್ಕಳು ಸೇರಿದಂತೆ ಇತರರು ಭಾಗವಹಿಸಿದ್ದರು.

Tags:
error: Content is protected !!