ಚಾಮರಾಜನಗರ

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಜೆಟ್ ನಲ್ಲಿ 490 ಕೋಟಿ ಯೋಜನೆ ಘೋಷಣೆ ಮಾಡಿರುವುದಕ್ಕೆ ರಾಮಪುರ ಸಮೀಪದ ಕೆಂಪಯ್ಯನಹಟ್ಟಿ ಗ್ರಾಮದ ಪುಟಾಣಿಗಳು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ವರ್ಷ2025 ರ ಜುಲೈ 8ರಂದು ಕೆಂಪಯ್ಯನ ಹಟ್ಟಿ ಗ್ರಾಮದ ವಿದ್ಯಾರ್ಥಿಗಳಾದ ವರ್ಣಿಕ, ಮೀನಾ, ಋಷಿಕೇಶ್, ಶ್ರೀಕಂಠ ಎಂಬ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಮ್ಮ ಗ್ರಾಮದಲ್ಲಿ ಪುಟ್ಟ ಮಕ್ಕಳು ನಮ್ಮ ತಾಯಿ ತಂದೆಯವರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ನೋಡಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಇದಲ್ಲದೆ ಇವರು ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವೈರಲ್ ವಿಡಿಯೋನಲ್ಲಿ ಮಕ್ಕಳು ನಮ್ಮ ಗ್ರಾಮದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿತಗೊಂಡಿದೆ. ಗ್ರಾಮದಲ್ಲಿ ನೀರಿನ ಕೊರತೆಯಿಂದ ಪ್ರಾಣಿ ಪಕ್ಷಿಗಳು ಸಹ ಪರಿತಪ್ಪಿಸುತ್ತಿವೆ. ಈ ಕಾರಣದಿಂದ ಗ್ರಾಮದಲ್ಲಿ ಕೃಷಿ ಚಟುವಟಿಕೆಗಳು ನಡೆಯದೆ ಜನರು ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದಾರೆ ಈ ಸ್ಥಿತಿಯನ್ನು ನೋಡಿದಾಗ ನಮಗೆ ಬಹಳ ದುಃಖವಾಗುತ್ತದೆ ಎಂದು ಅಳಲನ್ನು ತೋಡಿಕೊಂಡಿದ್ದರು. ರಾಮಪುರ ಹೋಬಳಿಯ ಎಲ್ಲಾ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಮಕ್ಕಳು ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಆಂದೋಲನ ದಿನ ಪತ್ರಿಕೆಯಲ್ಲಿ ಜುಲೈ 9 ರಂದು ರಾಮಪುರ ಹೋಬಳಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮಗ್ರವಾಗಿ ವರದಿ ಪ್ರಕಟಿಸಲಾಗಿತ್ತು.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಮಪುರ ಹೋಬಳಿ ವ್ಯಾಪ್ತಿಯ 12,ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿರುವುದರಿಂದ ಶನಿವಾರ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

18 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

19 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

19 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

19 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

19 hours ago