ಹನೂರು: ಅಕ್ರಮ ನಾಡ ಬಂದೂಕು ಶೇಖರಣೆ ಮಾಡಿಟ್ಟುಕೊಂಡಿದ್ದ ವ್ಯಕ್ತಿಯನ್ನು ರಾಮಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದ ಮಹಿಮೈನಾಥನ್ ಆಲಿಯಾಸ್ ಮೀಸೆ ರಾಜು ಬಂಧಿತ ವ್ಯಕ್ತಿಯಾಗಿದ್ದಾರೆ.
ಸಂದನ ಪಾಳ್ಯ ಗ್ರಾಮದ ಮಹಿಮೈನಾಥನ್ ಕಿರೆ ಪಾತಿ ಗ್ರಾಮದ ತಮ್ಮ ಜಮೀನಿನಲ್ಲಿ ಸರ್ಕಾರದಿಂದ ಪರವಾನಿಗೆ ಪಡೆಯದೆ ಅಕ್ರಮವಾಗಿ ನಾಡ ಬಂದುಗಳನ್ನು ತಯಾರಿಸಿ ಇಟ್ಟುಕೊಂಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ, ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದ್ರ, ಪ್ರಭಾರ ಇನ್ಸ್ಪೆಕ್ಟರ್ ಶಶಿಕುಮಾರ್ ಮಾರ್ಗದರ್ಶನದಲ್ಲಿ ರಾಮಾಪುರ ಎಸ್ಐ ಈಶ್ವರ ದಾಳಿ ನಡೆಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಂದಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.