ಚಾಮರಾಜನಗರ

ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ: ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ: ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಶನಿವಾರ(ಆ.10) ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು.

ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು ಮಾತಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು ಎಂದರು.

ರಾಮಕೃಷ್ಣ ಹೆಗಡೆ ಅವರ ಮಂತ್ರಿ ಮಂಡಲದಲ್ಲಿ ಪ್ರಭಾವಿ ಆಗಿದ್ದ ರಾಚಯ್ಯನವರಿಗೆ, ಪ್ರತಿಭಾವಂತ, ಜನಪರ ಕಾಳಜಿಯುಳ್ಳ ರಾಜಕಾರಣಿಗಳನ್ನು ಹತ್ತಿರಕ್ಕೆ ಕರೆದು ಬೆಳೆಸುವ ಗುಣ ಇತ್ತು. ಹೆಗಡೆ ಮತ್ತು ರಾಚಯ್ಯ ಅವರು ನನ್ನನ್ನು ಕರೆದು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದರು. ಬಳಿಕ ನನ್ನನ್ನು ಮಂತ್ರಿ ಮಾಡಿದರು ಎಂದು ಇತಿಹಾಸ ಸ್ಮರಿಸಿಕೊಂಡರು.

ಅವತ್ತು ನಾನು ಮಂತ್ರಿ ಆಗದೇ ಹೋಗಿದ್ದರೆ ನಾನು ಇವತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಇದೇ ಕೆಲವರಿಗೆ ಹೊಟ್ಟೆಯುರಿ ಎಂದು ತಮ್ಮ ಮೇಲೆ ಆರೋಪಿಸಿರುವವರಿಗೆ ಟೀಕಿಸಿದರು.

ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್ ಗಳು. ನಾನೂ ಕೂಡ ರಾಚಯ್ಯನವರ ಪ್ರಾಡಕ್ಟು ಎಂದರು.

ರಾಚಯ್ಯನವರು ನಡೆದಂತ ದಾರಿಯಲ್ಲೇ ನಡೆಯಪ್ಪಾ ಎಂದು ಅವರ ಪುತ್ರ ಶಾಸಕ ಕೃಷ್ಣಮೂರ್ತಿ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಕಿವಿ ಮಾತು ಹೇಳಿ, ಸದಾ ಬಡವರ ಪರವಾಗಿ ಇರಬೇಕು. ಯಾರನ್ನೂ ದ್ವೇಷಿಸಬಾರದು ಎಂದರು.

ಇವತ್ತು ನಾವೆಲ್ಲಾ ಶಾಸಕರಾಗಿರುವುದು, ಮಂತ್ರಿಗಳಾಗಿರುವುದು, ಮುಖ್ಯಮಂತ್ರಿಗಳಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ. ರಾಚಯ್ಯನವರು ಸಂವಿಧಾನದ ಮಾರ್ಗದಲ್ಲಿ ನಡೆದರು. ಇವರು ಇವತ್ತಿನ ಯುವ ಪೀಳಿಗೆಗೂ ಮಾದರಿ ಎಂದರು.

ರಾಚಯ್ಯ ಸ್ಮಾರಕದಲ್ಲಿ IAS-IPS ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಚಾಮರಾಜನಗರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಲೂರು ಗ್ರಾಮದಲ್ಲಿ ಸ್ಮಾರಕ ಭವನ ನಿರ್ಮಿಸಲಾಗಿದೆ.

ನಮಗೆ ತಂಗಳು ಇರ್ತಿತ್ತು. ಇಡ್ಲಿ, ದೋಸೆ ಇರ್ತಿಲಿಲ್ಲ

ನಮಗೆ ಮನೆಯಲ್ಲಿ ತಂಗಳು ಇರ್ತಿತ್ತೇ ಹೊರತು, ಇಡ್ಲಿ, ದೋಸೆ, ಉಪ್ಪಿಟ್ಟು ಏನೂ ಇರ್ತಾ ಇರ್ಲಿಲ್ಲ. ರಾತ್ರಿ ಉಳಿದ ಮುದ್ದೆಗೆ ಮಜ್ಜಿಗೆ ಬೆರೆಸಿ ತಂಗಳು ತಿಂತಾ ಇದ್ವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆ ದಿನಗಳನ್ನು ಸ್ಮರಿಸಿದರು.

ರಾಯಚ್ಯನವರ ಸ್ಮಾರಕ‌ ಉದ್ಘಾಟನಾ ಭಾಷಣ ಶುರು ಮಾಡುವ ವೇಳೆಗೆ ಸಂಜೆ 4 ಗಂಟೆ ಆಗಿತ್ತು. ಊಟದ ಸಮಯ ತಡವಾದದ್ದನ್ನು ಪ್ರಸ್ತಾಪಿಸಿ ಕ್ಷಮೆ ಕೋರಿ ಭಾಷಣ ಆರಂಭಿಸಿದ ಮುಖ್ಯಮಂತ್ರಿಗಳು ಮೇಲಿನ‌ ಪ್ರಸಂಗ ನೆನಪಿಸಿಕೊಂಡರು.

ರಾಚಯ್ಯ ಅವರ ಮನೆಯಲ್ಲೂ ಇಡ್ಲಿ ದೋಸೆ ಇರ್ತಿಲಿಲ್ಲ ಅಂತ ಕಾಣ್ತದೆ. ಅವರೂ ನನ್ನಂಗೆ ತಂಗಳು ತಿಂದು ಗಟ್ಟಿಯಾದರು ಎಂದರು.

ಕಾರ್ಯಕ್ರಮದಲ್ಲಿ   ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಚಪ್ಪ ಅವರ ಪತ್ನಿ ಗೌರಮ್ಮ, ಸಂಸದರಾದ ಸುನಿಲ್ ಬೋಸ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

11 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

17 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

18 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

24 hours ago