Mysore
26
light rain

Social Media

ಗುರುವಾರ, 01 ಅಕ್ಟೋಬರ್ 2026
Light
Dark

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ ಚಾಲಕನಿಗೆ ಅರಣ್ಯಾಧಿಕಾರಿಗಳು ಸೂಕ್ತ ಶಿಕ್ಷೆ ವಿಧಿಸಿದ್ದಾರೆ.

ಮಲಪ್ಪುರಂ ಜಿಲ್ಲೆಯ ಮರುತಾ ಮೂಲದ ಜಿನ್ಷಾದ್ ಸಿ. ಎಂಬಾತನೇ ದಂಡಕ್ಕೊಳಗಾದ ಲಾರಿ ಚಾಲಕ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆದ್ದಾರಿಯಲ್ಲಿ ಕಾಡಾನೆಯೊಂದು ರಸ್ತೆ ದಾಟುತ್ತಿದ್ದಾಗ, ವಾಹನವನ್ನು ನಿಲ್ಲಿಸಿ ಆನೆಗೆ ದಾರಿ ಮಾಡಿಕೊಡುವ ಬದಲು ಚಾಲಕ ಲಾರಿಯನ್ನು ಆನೆಯ ಸಮೀಪದಲ್ಲೇ ಮುನ್ನುಗ್ಗಿಸಿ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿದ್ದಾನೆ.

ಈ ಬೇಜವಾಬ್ದಾರಿ ಕೃತ್ಯವನ್ನು ಗಮನಿಸಿದ ಬಂಡೀಪುರ ಅರಣ್ಯ ಇಲಾಖೆಯ ಸಿಬ್ಬಂದಿ ಲಾರಿ ಚಾಲಕನನ್ನು ಪತ್ತೆ ಮಾಡಿ, ವನ್ಯಜೀವಿಗಳಿಗೆ ತೊಂದರೆ ನೀಡಿದ ಹಾಗೂ ಅರಣ್ಯ ನಿಯಮ ಉಲ್ಲಂಘಿಸಿದ ಆರೋಪದಡಿಯಲ್ಲಿ ಚಾಲಕನಿಂದ ₹5,000 ದಂಡ ವಸೂಲಿ ಮಾಡಿದ್ದಾರೆ. ಅಲ್ಲದೆ, ಅರಣ್ಯ ಪ್ರದೇಶದಲ್ಲಿ ವಾಹನ ಚಾಲನೆ ಮಾಡುವಾಗ ವನ್ಯಜೀವಿಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!