ಹನೂರು : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ.
ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ಪ್ರಕಾಶ್( 38)ಮಳ್ಳವಳ್ಳಿ ತಾಲೂಕಿನ ಮಾಗನೂರು ಗ್ರಾಮದ ನಾಗೇಂದ್ರಸ್ವಾಮಿ(45) ಮಳವಳ್ಳಿ ತಾಲೂಕಿನ ರಾಗಿಬೋಮ್ಮನಹಳ್ಳಿ ನಾಗರಾಜು(54) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಹನೂರು ತಾಲೂಕಿನ ಗುಂಡಿಮಾಳ ಗ್ರಾಮದಿಂದ ಒಡೆಯರ ಪಾಳ್ಯ ಲೊಕ್ಕನಹಳ್ಳಿ ಮಾರ್ಗವಾಗಿ ಹನೂರು ಕಡೆಗೆ ನಕ್ಷತ್ರ ಆಮೆ ರವಾನೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಹನೂರಿನ ಹುಲುಸುಗುಡ್ಡೆ ಸಮೀಪ ಎಸ್ ಐ ವಿಜಯರಾಜ್ ನೇತ್ರತ್ವದ ತಂಡ ದಾಳಿ ನಡೆಸಿ 1ಕೆಜಿ 280 ಗ್ರಾಮ ತೂಕದ ಎರಡು ಜೀವಂತ ನಕ್ಷತ್ರ ಆಮೆ, ಸಾಗಾಟ ಮಾಡಲು ಬಳಸಿದ್ದ ಕೆಎ 51ಎ 3369 ಬಿಳಿ ಟಾಟಾ ಇಂಡಿಕಾ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ದಾಳಿಯಲ್ಲಿ ಎಸ್ ಐ ವಿಜಯರಾಜ್, ಮುಖ್ಯಪೇದೆಗಳಾದ ಸ್ವಾಮಿ ಶಂಕರ್, ಬಸವರಾಜ್ ಪೇದೆ ರಾಮಚಂದ್ರಸ್ವಾಮಿ, ಬಸವರಾಜು ಚಾಲಕ ಪ್ರಭಾಕರ್ ಹಾಜರಿದ್ದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…