Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ವೀಲ್ಹಿಂಗ್:‌ ಸಾರ್ವಜನಿಕರ ಆಕ್ರೋಶ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್‌ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಆಟೋ ಚಾಲಕರು ಹುಚ್ಚಾಟ ಮೆರೆದಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಸ್ತೆಗಳ ಆಟೋಗಳ ವೀಲ್ಹಿಂಗ್‌ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ಪ್ರಕರಣ ಸಂಬಂಧ ಚಾಮರಾಜನಗರ ಜಿಲ್ಲೆಗೆ ಸೇರಿದ ಮೂರು ಆಟೋ ಡ್ರೈವರ್‌ಗಳ ಮೇಲೆ ಕೇಸ್ ದಾಖಲಾಗಿದೆ.

ವಿಡಿಯೋ ಗಮನಿಸಿ ಪೊಲೀಸರ ಶಿಸ್ತು ಕ್ರಮಕ್ಕೆ ಮುಂದಾಗಿದ್ದು, ಆಟೋಗಳ ನಂಬರ್ ಆಧರಿಸಿ ಹುಚ್ಚಾಟ ಮೆರೆದವರ ಪತ್ತೆಗೆ ಬಲೆ ಬೀಸಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!