ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಪುಂಡರು ಮತ್ತೆ ಆಟೋ ವೀಲ್ಹಿಂಗ್ ಮಾಡಿದ್ದು, ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಆಟೋ ವೀಲ್ಹಿಂಗ್ ಮಾಡಿದ್ದ ಪುಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಚಾಲಕರಿಗೆ ಚಳಿ ಬಿಡಿಸಿದ್ದರು. ಈಗ ಮತ್ತೆ ಪುಂಡರು ಆಟೋ ವೀಲ್ಹಿಂಗ್ ಮಾಡಿದ್ದು, ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋವನ್ನು ವೀಕ್ಷಣೆ ಮಾಡಿದ ಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಆಟೋವನ್ನು ವಶಕ್ಕೆ ಪಡೆದುಕೊಳ್ಳಲು ಹಾಗೂ ಪ್ರಕರಣ ದಾಖಲಿಸಲು ಹುಡುಕಾಟ ನಡೆಸುತ್ತಿದ್ದಾರೆ.





