ಹನೂರು: ದೇಶದ ಅಭಿವೃದ್ದಿಗೆ ಶ್ರಮಿಸುವ ಕಾರ್ಮಿಕರ ಜೀವನ ಸುಧಾರಣೆಗಾಗಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರು ಹಲವು ಕಾಯ್ದೆಗಳನ್ನು ಜಾರಿ ಮಾಡಿದ್ದರು ಎಂದು ಶಾಸಕ ನರೇಂದ್ರ ಅವರು ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಉಪಪ್ರಧಾನಿ ಡಾ.ಜಗಜೀವನ್ ರಾಂ ಅವರ 118 ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಣೆಗಾಗಿ ಹಲವು ಕಾಯ್ದೆಯನ್ನು ಜಾರಿಗೆ ತಂದಿದ್ದರು ಎಂದರು.
ದೇಶದ ಉಪ ಪ್ರಧಾನಿಯಾಗಿ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ದೇಶದ ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ದೇಶದ ಕೃಷಿ, ಕಾನೂನು ಹಾಗೂ ಕಾರ್ಮಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದರು ಎಂದರು.
ದಲಿತರನ್ನು ಜೀತ ಪದ್ಧತಿಯಿಂದ ಮುಕ್ತಗೊಳಿಸುವುದು ಬಾಬು ಜಗಜೀವನರಾಮ್ ಅವರ ಮಹಾದಾಸೆಯಾಗಿತ್ತು. ಆದ್ದರಿಂದಲೇ ಅವರು ರಾಜಕೀಯ ಪ್ರವೇಶಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವುದರ ಜತೆಗೆ ಹರಿಜನ ಸೇವಾ ಸಂಘದ ಮೂಲಕ ದಲಿತರ ಉದ್ದಾರಕ್ಕಾಗಿ ಶ್ರಮಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಳ್ಯ ರಾಚಯ್ಯ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಗಿರೀಶ್, ಹರೀಶ್, ಸಂಪತ್ ಕುಮಾರ್,ಬಸವರಾಜು, ನವೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್, ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…