ಚಾಮರಾಜನಗರ

ಕಾರ್ಮಿಕರ ಏಳ್ಗೆಗಾಗಿ ಬಾಬುಜಿ ಹಲವಾರು ಕೊಡುಗೆ: ಆರ್‌. ನರೇಂದ್ರ

ಹನೂರು: ದೇಶದ ಅಭಿವೃದ್ದಿಗೆ ಶ್ರಮಿಸುವ ಕಾರ್ಮಿಕರ ಜೀವನ ಸುಧಾರಣೆಗಾಗಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್‌ ರಾಮ್‌ ಅವರು ಹಲವು ಕಾಯ್ದೆಗಳನ್ನು ಜಾರಿ ಮಾಡಿದ್ದರು ಎಂದು ಶಾಸಕ ನರೇಂದ್ರ ಅವರು ತಿಳಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಉಪಪ್ರಧಾನಿ ಡಾ.ಜಗಜೀವನ್ ರಾಂ ಅವರ 118 ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಣೆಗಾಗಿ ಹಲವು ಕಾಯ್ದೆಯನ್ನು ಜಾರಿಗೆ ತಂದಿದ್ದರು ಎಂದರು.

ದೇಶದ ಉಪ ಪ್ರಧಾನಿಯಾಗಿ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ದೇಶದ ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ದೇಶದ ಕೃಷಿ, ಕಾನೂನು ಹಾಗೂ ಕಾರ್ಮಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದರು ಎಂದರು.

ದಲಿತರನ್ನು ಜೀತ ಪದ್ಧತಿಯಿಂದ ಮುಕ್ತಗೊಳಿಸುವುದು ಬಾಬು ಜಗಜೀವನರಾಮ್‌ ಅವರ ಮಹಾದಾಸೆಯಾಗಿತ್ತು. ಆದ್ದರಿಂದಲೇ ಅವರು ರಾಜಕೀಯ ಪ್ರವೇಶಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವುದರ ಜತೆಗೆ ಹರಿಜನ ಸೇವಾ ಸಂಘದ ಮೂಲಕ ದಲಿತರ ಉದ್ದಾರಕ್ಕಾಗಿ ಶ್ರಮಿಸಿದರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಳ್ಯ ರಾಚಯ್ಯ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಗಿರೀಶ್, ಹರೀಶ್, ಸಂಪತ್ ಕುಮಾರ್,ಬಸವರಾಜು, ನವೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್, ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago