ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ವಿರೋಧ ಪಕ್ಷಗಳು ಪರಸ್ಪರ ಕೆಸರೆರೆಚಾಟಕ್ಕೆ ಮುಂದಾಗಿವೆ. ಅದರಲ್ಲಿಯೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ ಎಲ್ಲೆಡೆ ಸದ್ದು ಮಾಡುತ್ತಿದೆ.
ಏ.೪ ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡುವ ದಿನ ಚಾಮರಾಜನಗರದ ಬೀದಿ-ಬೀದಿಗಳಲ್ಲಿ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಸುನೀಲ್ ಬೋಸ್, ಗೋ ಬ್ಯಾಕ್ ಸುನೀಲ್ ಬೋಸ್ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಈ ಕಾವು ತಣ್ಣಗಾಗುವ ಮುನ್ನವೇ ಬಿಜೆಪಿ ಹಿರಿಯ ಸಂಸದ ವಿ.ಶ್ರೀನಿವಾಸ್ ಪ್ರಸಾದ್ಅವರನ್ನು ನಿಂದಿಸಿರುವ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪೋಸ್ಟರ್‌ನಲ್ಲಿ ‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನಲೆ ಪ್ರಸಾದ್ ವಿರುದ್ಧ ಬಿಜೆಪಿಯ ಬಾಲರಾಜ್ ಅವರು ಪೋಸ್ಟರ್ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಚಾಮರಾಜನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಿಜೆಪಿಯಿಂದ ದೂರು ಸಲ್ಲಿಸಲಾಗಿದೆ.
ಈ ವಿಚಾರವಾಗಿ ಹನೂರು ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಚಾಮರಾಜನಗರ ಲೋಕಸಭಾ ಅಭ್ಯರ್ಥಿ ಎಸ್. ಬಾಲರಾಜು, ‘ಸುಳ್ಳು ಆರೋಪ ಮಾಡಿದವರಿಗೆ ಮಾದಪ್ಪನೇ ತಕ್ಕ ಶಾಸ್ತಿ ಮಾಡಲಿ, ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಮೇಲೆ ನನಗೆ ತುಂಬಾ ಗೌರವವಿದೆʼ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನೀಡಿದ ದೂರಿನಲ್ಲೇನಿದೆ?
ಬಿಜೆಪಿ-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಎಸ್.ಬಾಲರಾಜ್, ಸಂಸದ ವಿ.ಶ್ರೀನಿವಾಸ ಪ್ರಸಾದ್ ಉತ್ತಮ ಸಂಬಂಧವನ್ನು ಹೊಂದಿದ್ದು ಇದನ್ನು ಸಹಿಸದ ಕಿಡಿಗೇಡಿಗಳಾದ ನವಾಜ್, ರವಿ ಅವರು ಸುನೀಲ್ ಬೋಸ್ ಅಭಿಮಾನಿ ಬಳಗದ ವ್ಯಾಟ್ಸಾಪ್ ಗ್ರೂಪ್ ನಲ್ಲಿ ಎಸ್.ಬಾಲರಾಜ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…