ಚಾಮರಾಜನಗರ

ಚಾಮರಾಜನಗರ: ವರ್ಷದ ಮೊದಲ ಮಳೆಯಿಂದ ಬಾಳೆ ಬೆಳೆಗೆ ಸಂಕಷ್ಟ

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರದಂದು ಹಲವು ಕಡೆ ವರ್ಷದ ಮೊದಲ ಮಳೆಯಾಗಿದ್ದು, ಆ ಮಳೆ ಬಾಳೆಗೆ ಸಂಕಷ್ಟ ತಂದಿದೆ.

ಜಿಲ್ಲೆಯಲ್ಲಿ ನಿನ್ನೆ ರಾತ್ರಿ(ಮಾರ್ಚ್.‌12) ಹಲವೆಡೆ ಸುರಿದ ವರ್ಷದ ಮೊದಲ ಮಳೆಯಿಂದ ಜನರಿಗೆ ಒಂದೆಡೆ ಸಂತಸವಾಗಿದ್ದರೆ, ಮತ್ತೊಂದೆಡೆ ಬಿರುಗಾಳಿಯಿಂದ ರೈತರು ಬೆಳೆದಿರುವ ಬಾಳೆಯ ನಷ್ಟಕ್ಕೆ ಕಾರಣವಾಗಿದೆ.

ಬಿರುಗಾಳಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನಾಶವಾಗಿರುವ ಘಟನೆ ರಾಮಸಮುದ್ರ ಗ್ರಾಮದಲ್ಲಿ ನಡೆದಿದೆ. ರಾ. ಬಾಬು ಎಂಬ ರೈತ ತನ್ನ ಜಮೀನಿನಲ್ಲಿ ಏಲಕ್ಕಿ ಬಾಳೆಯನ್ನು ಬೆಳೆದಿದ್ದರು. ಆದರೆ ಅಚಾನಕ್‌ ಆಗಿ ಬಂದ ಮಳೆಯಿಂದ ಸುಮಾರು 2 ಲಕ್ಷ ರೂ. ಮೌಲ್ಯದ ಏಲಕ್ಕಿ ಬಾಳೆ ಬೆಳೆಯೂ ಸಂಪೂರ್ಣ ನೆಲಕಚ್ಚಿದೆ.

ಇನ್ನು 30 ನಿಮಿಷ ಬಿದ್ದ ಭಾರೀಮಳೆಗೆ ಲಕ್ಷಾಂತರ ರೂ. ಆದಾಯವನ್ನು ರೈತ ಕಳೆದುಕೊಂಡು ಚಿಂತೆಗೀಡಾಗಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

54 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

1 hour ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

3 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

5 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

8 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

8 hours ago