ಚಾಮರಾಜನಗರ

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.

ಬಂಡೀಪುರದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಆವರಣದಲ್ಲಿ ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ರವಿ ಕಿರಣ್ ನೇತೃತ್ವದಲ್ಲಿ ಜಮಾಯಿಸಿದ 40 ಕ್ಕೂ ಅಧಿಕ ರೈತರು ವನ್ಯಜೀವಿ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಸಫಾರಿ ಬೇಡ ಎಂದು ಘೋಷಣೆ ಕೂಗಿದರು. ಇದರ ಬೆನ್ನಲ್ಲೇ ಸಫಾರಿಯಿಂದ ಪ್ರವಾಸಿಗರು ಬರಲಿದ್ದು ರೆಸಾರ್ಟ್, ಹೋಂ ಸ್ಟೇ ಹಾಗೂ ಸ್ಥಳೀಯವಾಗಿ ಆರ್ಥಿಕ ಸ್ವಾವಲಂಬನೆಗೆ ಸಹಾಯಕವಾಗಲಿದೆ ಎಂದು ಸಫಾರಿ ಬೆಂಬಲಿತರು ಧರಣಿಗೆ ಮುಂದಾದರು.

ಪರಿಸ್ಥಿತಿಯನ್ನು ತಿಳಿಗಿಳಿಸಲು ಮುನ್ನೆಚ್ಚರಿಕೆ ಕ್ರಮವಾಗಿ 30 ಕ್ಕೂ ಅಧಿಕ ರೈತರನ್ನು ವಶಕ್ಕೆ ಪಡೆದು ಬೇಗೂರು ಪೊಲೀಸ್ ಠಾಣೆಗೆ ಹಾಗೂ 20 ಕ್ಕೂ ಅಧಿಕ ಸಫಾರಿ ಬೆಂಬಲಿತರನ್ನು ವಶಕ್ಕೆ ಪಡೆದು ತೆರಕಣಾಂಬಿ ಠಾಣೆಗೆ ಕರೆದೊಯ್ಯಲಾಯಿತು.

ಸಫಾರಿ ಪುನಾರಂಭಕ್ಕೆ ಪರ ವಿರೋಧ ವ್ಯಕ್ತವಾದ ಹಿನ್ನೆಲೆ ಚಾಮರಾಜನಗರ ಪೊಲೀಸ್ ಇಲಾಖೆ ಭಾರೀ ಬಿಗಿ ಭದ್ರತೆ ಕೈಗೊಂಡಿದ್ದರು. ಇನ್ನು, ಆದೇಶ ಕೈ ಸೇರದ ಹಿನ್ನೆಲೆ ಬಂಡೀಪುರದಲ್ಲಿ ಸಫಾರಿ ಇನ್ನೂ ಆರಂಭಗೊಂಡಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

4 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

4 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

4 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

5 hours ago

ಲಾರಿ-ಬೈಕ್ ಮುಖಾಮುಖಿ ಢಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು

ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…

6 hours ago