ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈ ಪ್ರಶಸ್ತಿ ಎರಡನೇ ಬಾರಿಗೆ ಒಲಿದಿದೆ.
ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಅತ್ಯುತ್ತಮ ವನ್ಯಧಾಮ ಎಂದು ಎಂಬ ಹಿರಿಮೆಗೆ ಪಾತ್ರವಾಗಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ, ವೈಲ್ಡ್ ಲೈಫ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಮಿನಿಸ್ಟ್ರಿ ಆಫ್ ಎನ್ವೆರ್ನ್ಸೆಂಟ್ ಆ್ಯಂಡ್ ಫಾರೆಸ್ಟ್ ಸಂಸ್ಥೆಯು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕೈಗೊಂಡ ಕ್ರಮಗಳು, ಪ್ರವಾಸಿಗರು, ಶುಚಿತ್ವ, ಸಿಬ್ಬಂದಿ ಮುಂತಾದ ಅಂಶಗಳ ಮಾನದಂಡಗಳ ಪರಿಗಣಿಸಿ ಸಮೀಕ್ಷೆ ನಡೆಸುತ್ತದೆ.
ದೇಶದ 54 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆದಿದ್ದು, ಪ್ರಸಕ್ತ ಸಾಲಿನ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಬಾರಿ ಅತ್ಯುತ್ತಮ ವನ್ಯಧಾಮ ಎಂಬ ಪ್ರಶಸ್ತಿ ಸಂದಿದೆ.
ಕೇರಳದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೊದಲ ಸ್ಥಾನ, ಬಂಡಿಪುರ ಎರಡನೇ ಸ್ಥಾನ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂರನೇ ಸ್ಥಾನ ಲಭಿಸಿದೆ.
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…