ಚಾಮರಾಜನಗರ

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳು ಕಾಣಿಸಿಕೊಂಡಿವೆ.

ಕಳೆದ ವರ್ಷ ತಾಯಿ ಕಣ್ಮರೆಯಾದ ನಂತರ ಹೊರಗೆ ಕಾಣಿಸದೆ ಕಾಡಿನೊಳಗೆ ಇದ್ದ ಮೂರು ಮರಿಗಳು ಇದೇ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡಿರುವುದು ಪ್ರವಾಸಿಗರಿಗೆ ಪುಳಕವನ್ನುಂಟುಮಾಡಿದೆ.

ಕಳೆದ ನವೆಂಬರ್‌ನಲ್ಲಿ ಸಫಾರಿ ಬಂದ್ ಆಗಿದ್ದರಿಂದ ಯಾವುದೇ ವಾಹನಗಳ ಓಡಾಟವಿಲ್ಲದೆ ಸ್ವಚ್ಚಂದವಾಗಿದ್ದ ವನ್ಯಜೀವಿಗಳು ಸಫಾರಿ ಆರಂಭವಾದ ನಂತರ ಪ್ರವಾಸಿಗರಿಗೆ ದರ್ಶನ ನೀಡುತ್ತಿವೆ.

ಸೋಮವಾರ ಬೆಳಗ್ಗೆ ಸಫಾರಿ ಸಂದರ್ಭದಲ್ಲಿ ಕಿರುಬನ ಕೊಳಚಿ ಸಮೀಪ ಕೇತಳ್ಳಿ ಕೆರೆ ಫೀಮೇಲ್ ತನ್ನ ಎರಡು ಮರಿಗಳ ಜೊತೆ ಮಲಗಿರುವುದು ಹಾಗೂ ಅದೇ ಕೆರೆಯಲ್ಲಿ ನೀರು ಕುಡಿಯುತ್ತಿದ್ದ ಮೂರ್ಕೆರೆ ಫೀಮೇಲ್‌ನ ಮೂರು ಮರಿಗಳು ಕಾಡಿನತ್ತ ಓಡಿಹೋದ ವೀಡಿಯೋ ಸಖತ್ ವೈರಲ್ ಆಗುತ್ತಿದೆ.

ಕಳೆದ ವರ್ಷ ತನ್ನ ಮೂರು ಮರಿಗಳ ಜತೆಗೆ ಪ್ರವಾಸಿಗರಿಗೆ ದರ್ಶನ ನೀಡುತ್ತಿದ್ದ ಮೂರ್ಕೆರೆ ಫೀಮೇಲ್ ಹೆಸರಿನ ಹೆಣ್ಣುಹುಲಿ ಅಕ್ಟೋಬರ್ ತಿಂಗಳಿನಲ್ಲಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿತ್ತು. ಎಡ ಕಾಲಿಗೆ ಆದ ಗಾಯದಿಂದ ಕುಂಟುತ್ತಿದ್ದ ತಾಯಿ ತನ್ನ ೧೦ ತಿಂಗಳ ಮರಿಗಳನ್ನು ತೊರೆದುಹೋಗಿತ್ತು. ಅರಣ್ಯ ಇಲಾಖೆ ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗದೆ ಅದು ಬದುಕಿದೆಯೋ ಸತ್ತಿದೆಯೇ ಎಂಬುದೇ ತಿಳಿಯದಂತಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮರಿಗಳ ರಕ್ಷಣೆ ಹಾಗೂ ಪಾಲನೆಗೆ ಮುಂದಾಗಿತ್ತು. ಇನ್ನೂ ಬೇಟೆಯಾಡುವ ಕೌಶಲ್ಯ ಕಲಿಯದೆ ತಮ್ಮ ಆಹಾರವನ್ನು ಸಂಪಾದಿಸಲು ಸಾಧ್ಯವಾಗದೆ ಅನಾಥವಾಗಿದ್ದ ಮರಿಗಳಿಗೆ ಆಹಾರ ನೀಡುವ ವ್ಯವಸ್ಥೆ ಮಾಡಿತ್ತು. ಜತೆಗೆ ಕಾಡಿನಲ್ಲಿರುವ ಇತರ ಹುಲಿ ಚಿರತೆಗಳಿಂದ ಅಪಾಯವಾಗದಂತೆ ಥರ್ಮಲ್ ಡ್ರೋನ್ ಕ್ಯಾಮರಾಗಳ ಮೂಲಕ ಕಣ್ಗಾವಲಿರಿಸಿ ಸಂರಕ್ಷಿಸಿತ್ತು.
ಸದ್ಯ ಮರಿಗಳಿಗೆ ಸದ್ಯ ಒಂದೂವರೆ ವರ್ಷ ವಯಸ್ಸಾಗಿದ್ದು, ಇವು ಸ್ವಂತವಾಗಿ ಬೇಟೆಯಾಡುವ ಸಾಮರ್ಥ್ಯ ಬೆಳೆಸಿಕೊಂಡಿವೆ. ಜಿಂಕೆಗಳನ್ನು ಬೇಟೆಯಾಡಿ ತಿನ್ನುತ್ತಿವೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

4 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

13 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

14 mins ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

1 hour ago

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

2 hours ago