ಗುಂಡ್ಲುಪೇಟೆ: ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಗುಂಡ್ಲುಪೇಟೆಯಲ್ಲಿಂದು ಅದ್ಧೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು.
ಜೆಎಸ್‌ಎಸ್ ಕಾಲೇಜು ಆವರಣದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ ಬಸವೇಶ್ವರರ ಭಾವಚಿತ್ರಕ್ಕೆ ಸೋಮಹಳ್ಳಿ ವೀರಸಿಂಹಾಸನ ಶಿಲಾ ಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಪ್ಪ ಸ್ವಾಮೀಜಿ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಈ ವೇಳೆ ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ನಿರಂಜನ್ ಕುಮಾರ್, ಮಹಾಸಭಾ ತಾಲ್ಲೂಕು ಅಧ್ಯಕ್ಷ ರವಿ ಕಮರಹಳ್ಳಿ ಸೇರಿದಂತೆ ಹಲವು ಭಾಗಿಯಾಗಿದ್ದರು.
ಬಳಿಕ ಹಲವಾರು ಜಾನಪದ ಕಲಾತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಯುವಕರು ಹಾಗೂ ಮುಖಂಡರು ಹಾಡಿಗೆ ನೃತ್ಯ ಮಾಡಿದರು. ಬಳಿಕ ಸೋಮೇಶ್ವರ ವಿದ್ಯಾರ್ಥಿನಿಲಯದಲ್ಲಿ ಸುಮಾರು 15 ಸಾವಿರ ಜನರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.