ಚಾಮರಾಜನಗರ

ಬಸವಣ್ಣನವರ ಸಂದೇಶಗಳು ಇಂದಿಗೂ ಪ್ರಸ್ತುತ : ಶಿವಮೂರ್ತಿ

ಕೊಳ್ಳೇಗಾಲ : ೧೨ನೇ ಶತಮಾನದಲ್ಲಿ ಬಸವಣ್ಣನವರು ಸವಾಜದ ಪರಿವರ್ತನೆಯ ಕ್ರಾಂತಿ ಉಂಟುಮಾಡಿದ್ದು, ೨೧ ನೇ ಶತಮಾನದಲ್ಲೂ ಅವರ ಸಂದೇಶಗಳು ಪ್ರಚಲಿತವಾಗಿವೆ ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಜೆಎಸ್‌ಎಸ್ ಕಾಲೇಜಿನ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜೆಎಸ್‌ಎಸ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಸಮಾರಂಭ ಏರ್ಪಡಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ೧೨ನೇ ಶತಮಾನದಲ್ಲಿ ಬಸವಣ್ಣನವರು ಸಮಾಜದ ಪರಿವರ್ತನೆಯ ಕ್ರಾಂತಿ ಉಂಟುಮಾಡಿದ್ದು, ೨೧ ನೇ ಶತಮಾನದಲ್ಲೂ ಅವರ ಸಂದೇಶಗಳು ಪ್ರಚಲಿತವಾಗಿವೆ ಎಂದರು.

ಅದರಲ್ಲೂ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಬಸವಣ್ಣರವರ ಆಶೋತ್ತರದಂತೆ ಇಂದು ನಮ್ಮ ಕರ್ನಾಟಕ ರಾಜ್ಯ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡು ಇವರ ಆಶಯದಂತೆ ಮಹಿಳೆಯರಿಗೆ ಶೇ.೩೩ ಮೀಸಲಾತಿಯನ್ನು ಸರ್ಕಾರ ನೀಡಿದೆ. ಈ ಮೂಲಕ ಆಡಳಿತ ಹಾಗೂ ರಾಜಕೀಯದಲ್ಲಿ ಮಹಿಳೆಯರು ಮುಂದೆ ಬರಲು ಸಾಧ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ತೇರ್ಗಡೆ ಹೊಂದಿ ಉನ್ನತ ಅಧಿಕಾರಿಗದಳಾಗುವ ಗುರಿಯನ್ನು ಹೊಂದಿರಬೇಕು ಎಂದು ತಿಳಿಸಿದರು.

ಜೆಎಸ್‌ಎಸ್ ಕಾಲೇಜು ಪ್ರಾಂಶುಪಾಲರಾದ ಮಹದೇವಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲ್ಲೂಕು ಕಸಾಪ ಅಧ್ಯಕ್ಷ ಎಸ್.ನಾಗರಾಜು ಕೊಂಗರಹಳ್ಳಿ, ಕಾರ್ಯದರ್ಶಿ ಸಿ.ನಾಗರಾಜು, ಬಂಡಳ್ಳಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಎಂ.ಮುತ್ತುರಾಜ್, ಜೆಎಸ್‌ಎಸ್ ಮುಖ್ಯಸ್ಥರಾದ ಮಮತ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

16 mins ago

ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲಿ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ: ಸಚಿವ ಕೆ ವೆಂಕಟೇಶ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…

55 mins ago

ಬೆಂಗಳೂರು ಏರ್‌ಪೋರ್ಟ್‌ ಹಾಗೂ ರಾಮನಗರದಲ್ಲಿ 3 ಕೋಟಿಗೂ ಅಧಿಕ ಡ್ರಗ್ಸ್‌ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು…

1 hour ago

ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

1 hour ago

ಬೆಟ್ಟಳ್ಳಿ ಮಾರಮ್ಮ ಜಾತ್ರೆಯನ್ನು ಯಶಸ್ವಿಗೊಳಿಸಿ: ತಹಶೀಲ್ದಾರ್‌ ಚೈತ್ರಾ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು…

2 hours ago

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…

2 hours ago