ಚಾಮರಾಜನಗರ

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್ ಹಾಗೂ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಮಾಲೀಕ ಅಂಬರೀಷ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹುಬ್ಬೆ ಹುಣಸೆ ಕೆರೆಯಲ್ಲಿ ಹೂಳು ತೆಗೆಯಲು ಬಳಸುತ್ತಿರುವ ಎರಡು ಹಿಟಾಚಿ ವಾಹನಗಳನ್ನು ಸಂಜೆ ವೇಳೆಗೆ ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ಪ್ರತಿದಿನ ನಿಲ್ಲಿಸಲಾಗುತ್ತಿತ್ತು. ಬೆಳಗ್ಗೆ ವಾಹನವನ್ನು ಹಿಟಾಚಿ ವಾಹನದ ಮಾಲೀಕರಾದ ಅಂಬರೀಶ್ ಹಾಗೂ ಅಪ್ಪ ದೊರೆ ಪರಿಶೀಲನೆ ನಡೆಸಿದಾಗ, ವಾಹನಗಳ ಬ್ಯಾಟರಿ, ಡೀಸೆಲ್ ಮತ್ತು ಬೆಲೆಬಾಳುವ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ವಾಹನ ಮಾಲೀಕರು ತಕ್ಷಣ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಪರಾಧ ವಿಭಾಗದ ಸಬ್‌ಇನ್ಸ್ಪೆಕ್ಟರ್ ರವಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago