ಚಾಮರಾಜನಗರ

ಕಾಂಗ್ರೆಸ್ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ: ಡಾ.ಅಸ್ಕರ್ ಅಲಿ

ಚಾಮರಾಜನಗರ: ಗುಂಡ್ಲುಪೇಟೆಯ ನಾಲ್ಕು ಪುರಸಭಾ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಿನ್ನೆಲೆಯಲ್ಲಿ ಅವರ ಮನೆಯ ಮುಂದೆ ಪ್ರತಿಭಟಿಸುವಾಗ ಬಿಜೆಪಿಯ ಮಾಜಿ ಶಾಸಕರಾದ ನಿರಂಜನ್ ಕುಮಾರ್ ರವರು ಕಾಂಗ್ರೆಸ್ ರವರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ ಎನ್ನುವ ಹೇಳಿಕೆ ನೀಡಿದ್ದು ಇದಕ್ಕೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಡಾ.ಅಸ್ಕರ್ ಅಲಿ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಪಕ್ಷವು ದೇಶಾದ್ಯಂತ ಕಾಂಗ್ರೆಸ್ ನ 207 ಶಾಸಕರನ್ನು ಒಳಗೊಂಡಂತೆ, ವಿವಿಧ ಪಕ್ಷಗಳ 335 ಎಂಎಲ್ಎಗಳನ್ನು ಖರೀದಿಸಿ ಕರ್ನಾಟಕ, ಮಹಾರಾಷ್ಟ್ರ, ಮಧ್ಯ ಪ್ರದೇಶ, ಬಿಹಾರ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ರಾಜ್ಯದ ಚುನಾಯಿತ ಸರ್ಕಾರಗಳನ್ನು ಕೆಡವಿದೆ. ಹಾಗಾಗಿ ಪಕ್ಷಾಂತದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. 17 ಶಾಸಕರನ್ನು ಪಕ್ಷಾಂತರ ಮಾಡಿಸಿ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿತ್ತು ಹಾಗೂ ಅದೇ ಸರ್ಕಾರದಲ್ಲಿ ತಾವು ನಿಗಮವೊoದರ ಅಧ್ಯಕ್ಷರಾಗಿ ಅಧಿಕಾರ ಅನುಭವಿಸುವಾಗ ನಿಮಗೆ ಯಾಕೆ ಸಂವಿಧಾನದ ನೆನಪಾಗಲಿಲ್ಲ. ಅನಂತ್ ಕುಮಾರ್ ಹೆಗಡೆ ರವರು ಪದೇಪದೇ ಸಂವಿಧಾನದ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾಗ ಸುಮ್ಮನಿದ್ದ ನೀವು ಈಗ ಏಕಾಏಕಿ ಸಂವಿಧಾನದ ಬಗ್ಗೆ ಕಾಂಗ್ರೆಸ್ಸಿಗರಿಗೆ ಪಾಠ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

ಪ್ರತಿಭಟನೆಯ ವೇಳೆ, ಎಲ್ಲಾ ಪಕ್ಷಗಳಿಗೂ ತಲಾ ಎರಡೆರಡು ಬಾರಿ ರೌಂಡ್ ಹೊಡೆದವರನ್ನು ಎಡಬಲದಲ್ಲಿ ಕೂರಿಸಿಕೊಂಡು ಪಕ್ಷಾಂತರದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ವ್ಯಂಗ್ಯ ವಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago