bear attacked a man who had gone out
ಹನೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೋರ್ವರ ಮೇಲೆ ಕರಡಿ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡಿರುವ ಘಟನೆ ಜರುಗಿದೆ.
ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದ ವೀರಪ್ಪ ಎಂಬುವವರೇ ಕರಡಿ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಗೆ ಬರುವ ಗೇರಟ್ಟಿ ಗ್ರಾಮದ ವೀರಪ್ಪ ಜಮೀನಿನ ಕಡೆ ಬಹಿರ್ದೆಸೆಗೆ ತೆರಳಿದ್ದರು. ಈ ವೇಳೆ ಏಕಾಏಕಿ ಕರಡಿ ದಾಳಿ ಮಾಡಿದೆ. ಪರಿಣಾಮ ಕಾಲು ತೊಡೆ ಭಾಗಕ್ಕೆ ಗಂಭೀರವಾಗಿ ಗಾಯವಾಗಿದೆ. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ತಮ್ಮ ಇಲಾಖೆಯ ವಾಹನದಲ್ಲಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಕೊಡಿಸಿದ ನಂತರ ವೀರಪ್ಪ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…