ಚಾಮರಾಜನಗರ : ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್ ಅರ್ಧನಾರೀಪುರ ಚೆಕ್‌ಪೋಸ್ಟ್‌ಗಳ ಮೂಲಕ ಹೋಗುವ ಬಸ್‌ಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಪೊಲೀಸರ ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಚಾಮರಾಜನಗರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್, ಎರಡೂ ರಾಜ್ಯಗಳ ನಡುವೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಕರ್ನಾಟಕಕ್ಕೆ ಬರುವ ತಮಿಳುನಾಡಿನ ಸಾರಿಗೆ ಬಸ್‌ಗಳ ಸಂಚಾರವು ಸಹ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.