ಚಾಮರಾಜನಗರ : ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್ ಅರ್ಧನಾರೀಪುರ ಚೆಕ್‌ಪೋಸ್ಟ್‌ಗಳ ಮೂಲಕ ಹೋಗುವ ಬಸ್‌ಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಪೊಲೀಸರ ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಚಾಮರಾಜನಗರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್, ಎರಡೂ ರಾಜ್ಯಗಳ ನಡುವೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಕರ್ನಾಟಕಕ್ಕೆ ಬರುವ ತಮಿಳುನಾಡಿನ ಸಾರಿಗೆ ಬಸ್‌ಗಳ ಸಂಚಾರವು ಸಹ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…