ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ತಂಪು ಜ್ಯೋತಿ ಹಾಗೂ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವ ನೆರವೇರಿಸಬೇಕೆಂದು ಹಲವಾರು ಭಕ್ತಾದಿಗಳು ಕನಸು ಕಟ್ಟಿಕೊಂಡಿದ್ದರು. ಈ ಹಿನ್ನೆಲೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಕಳೆದ ಮೂರು ವರ್ಷಗಳ ಹಿಂದೆ ತೇರು ನಿರ್ಮಾಣ ಮಾಡಿ ರಥೋತ್ಸವಕ್ಕೆ ಚಾಲನೆ ನೀಡಲಾಗಿದೆ.
ಯಶಸ್ವಿಯಾಗಿ ನಡೆದ ಮೂರನೇ ವರ್ಷದ ರಥೋತ್ಸವ: ಕಳೆದ ಮೂರು ವರ್ಷಗಳ ಹಿಂದೆ ನಿರ್ಮಾಣ ಮಾಡಿದ ತೇರನ್ನು ವಿನೂತನ ಮಾದರಿಯಲ್ಲಿ ನಾಲ್ಕು ಚಕ್ರಗಳುಳ್ಳ, ತಳಭಾಗದಲ್ಲಿ ಕುದುರೆ, ಸಿಂಹ ಲಾಂಛನ ಸೇರಿ ಎಂಟು ಅಷ್ಟ ಕಂಬಗಳುಳ್ಳ 14.5 ಅಡಿಯ ಶ್ರೀ ಬೆಟ್ಟಳ್ಳಿ ಮಾರಮ್ಮನ ಪುಷ್ಪಕ ರಥವು ನೋಡುಗರ ಕಣ್ಣನ ಸೆಳೆಯಿತು.
ರಥೋತ್ಸವದ ಹಿನ್ನೆಲೆ: ತೇರಿಗೆ ವಿವಿಧ ಬಗೆಯ ಫಲ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕರಾದ ರಾಜುರಾವ್ ವಿಶೇಷ ಪೂಜೆ ಸಲ್ಲಿಸಿದ ನಂತರ ಆಕಾಶದಲ್ಲಿ ಗರುಡ ತೇರಿನ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ದವಸ ಧಾನ್ಯ, ನಾಣ್ಯಗಳನ್ನು ಎಸೆದು ಹರಕೆ ಸಲ್ಲಿಸಿದರು. ರಥೋತ್ಸವದ ವೇಳೆ ಭಕ್ತಾದಿಗಳು ಜೈ ಬೆಟ್ಟಳ್ಳಿ ಮಾರಮ್ಮನಿಗೆ, ಬೆಟ್ಟಳ್ಳಿ ತಾಯಿಗೆ ಎಂದು ಘೋಷಣೆ ಕೂಗಿದರು.
ಪ್ರತಿ ಮಂಗಳವಾರ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು, ಪ್ರತಿವಾರವೂ ಬರುವಂತಹ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಇಷ್ಟಾರ್ಥ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ಕಾಣಿಕೆಗಳನ್ನು ಸಲ್ಲಿಸಿದರು.
ವಿವಿಧ ಬಗೆಯ ಫಲಪುಷ್ಪಗಳಿಂದ ಅಲಂಕಾರ: ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಪ್ರಯುಕ್ತ ಹನೂರು ಪಟ್ಟಣದ ಬೆನಕ ಡೆಕೋರೇಷನ್ ತಂಡದ ವತಿಯಿಂದ ಮೋಸಂಬಿ ಮುಸುಕಿನ ಜೋಳ ವಿವಿಧ ಬಗೆಯ ಫಲ ಪುಷ್ಪಗಳಿಂದ ದೇವಸ್ಥಾನದ ಒಳ ಆವರಣ ಹೊರ ಆವರಣದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಮುಂಭಾಗದ ಗಣಪತಿ ದೇವರ ತಳ ಭಾಗದಲ್ಲಿ ದೇವಿಯ ಕಣ್ಣುಗಳ ಮಾದರಿಯಲ್ಲಿ ಮಾಡಲಾಗಿದ್ದ ಹೂವಿನ ಅಲಂಕಾರ ನೋಡುಗರ ಕಣ್ಮನ ಸೆಳೆಯುತ್ತಿತ್ತು.
ವಿಶೇಷ ವಿದ್ಯುತ್ ದೀಪಾಲಂಕಾರ: ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಪ್ರಯುಕ್ತ ದೇವಸ್ಥಾನದ ಹೊರ ಆವರಣ, ಮುಖ್ಯ ರಸ್ತೆ ಮೈಸೂರು ಮಾರಮ್ಮ ದೇವಸ್ಥಾನದ ರಸ್ತೆ, ಮಲೆ ಮಹದೇಶ್ವರ ಬೆಟ್ಟದ ರಸ್ತೆ ಬಂಡಳ್ಳಿ ರಸ್ತೆ ಸೇರಿದಂತೆ ಮಾಡಲಾಗಿದೆ.
ಸೋಮವಾರ ತಡರಾತ್ರಿ ನೆರವೇರಿದ ಜಾಗರ ಸಮರ್ಪಣೆ: ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಮೊದಲ ದಿನವಾದ ಸೋಮವಾರ ತಡರಾತ್ರಿ ಜಾಗರ ಸಮರ್ಪಣೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಈ ಜಾಗರ ಸಮರ್ಪಣೆಗೆ ಜನರು ಒಂದು ವಾರದ ಮುಂಚೆ ಅವರೆ, ಜೋಳ ಸೇರಿದಂತೆ ಇನ್ನಿತರ ದವಸ ಧಾನ್ಯಗಳನ್ನು ಮೊಳಕೆ ಬರಿಸಿ ಪ್ರತಿನಿತ್ಯ ನೀರುಣಿಸಿ ಪೂಜೆ ಸಲ್ಲಿಸುವುದರ ಮೂಲಕ ಬೆಳೆಸಿದ ಧಾನ್ಯಗಳ ಪೈರುಗಳನ್ನು (ಜಾಗರ) ದೇವಾಲಯಕ್ಕೆ ಸಮರ್ಪಿಸುತ್ತಾರೆ. ಜಾಗರವನ್ನು ಮಕ್ಕಳು, ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ದು ವಿಶೇಷ ಪೂಜೆ ಸಲ್ಲಿಸಿದ ನಂತರ ದೇವಸ್ಥಾನಕ್ಕೆ ಸಮರ್ಪಿಸಲಾಯಿತು.
ರಂಗದಲ್ಲಿ ಕುಣಿದ ಮಹಿಳೆಯರು: ಈ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎರಡು ದಿನಗಳ ನಂತರ ಪ್ರತಿನಿತ್ಯ ದೇವಸ್ಥಾನದ ಆವರಣದಲ್ಲಿ ಮಾರಿಕುಣಿತ ಕುಣಿಯುವುದು ವಾಡಿಕೆ. ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಪಟ್ಟಣದ ವಿವಿಧ ಸಮುದಾಯದ ಮಹಿಳೆಯರು, ಮಕ್ಕಳು ಪುರುಷರು ಸೇರಿದಂತೆ ಒಟ್ಟಾಗಿ ಕುಣಿಯುವುದರ ಮೂಲಕ ಸಂಭ್ರಮಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್: ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಇನ್ಸ್‌ಪೆಕ್ಟರ್ ಆನಂದಮೂರ್ತಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಎರಡು ದಿನಗಳ ಕಾಲ ನಿರಂತರ ದಾಸೋಹ: ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ಹಾಗೂ ಬುಧವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದರಿಂದ ದೇವಸ್ಥಾನದ ವತಿಯಿಂದಲೇ ಎರಡು ದಿನಗಳ ಕಾಲ ಉಚಿತ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ ಭಕ್ತಾದಿಗಳು ಇದರ ಸೌಲಭ್ಯವನ್ನು ಪಡೆದುಕೊಳ್ಳುವಂತೆ ದೇವಸ್ಥಾನದ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ಯುಗಾದಿ ಹಬ್ಬದ ಒಂದು ವಾರಕ್ಕೂ ಮುನ್ನ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ನೆರವೇರುವುದು ಸಂಪ್ರದಾಯ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…