ಚಾಮರಾಜನಗರ

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಅಗ್ನಿಕುಂಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಕಳೆದ ನಾಲ್ಕು ದಿನಗಳಿಂದ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನೆರವೇರಿದೆ. ನಾಲ್ಕನೇ ದಿನವಾದ ಇಂದು ಮುಂಜಾನೆ 5 ಗಂಟೆಯ ವೇಳೆ ಅಗ್ನಿಕುಂಡೋತ್ಸವವನ್ನು ಪ್ರಧಾನ ಅರ್ಚಕರಾದ ರಾಜುರಾವ್ ಪ್ರದಕ್ಷಿಣೆ ಮಾಡಿದರು.

ಯಶಸ್ವಿಯಾಗಿ ನೆರವೇರಿದ ಅಗ್ನಿಕುಂಡೋತ್ಸವ: ಬುಧವಾರ ತಡರಾತ್ರಿ ಬೃಹತ್ ಗಾತ್ರದ ಮಡಿಕೆಯಲ್ಲಿ ಕಗ್ಗಲಿ ಸೌದೆ ಹಿಟ್ಟು ಪೂಜೆ ಸಲ್ಲಿಸಿದ ನಂತರ ರಾತ್ರಿಯಿಡಿ ಉರಿಸಲಾಗುವುದು. ಗುರುವಾರ ಬೆಳಿಗ್ಗೆ ಪ್ರದಾನ ಅರ್ಚಕರಾದ ರಾಜುರಾವ್ ದೇವಸ್ಥಾನದ ಸಮೀಪದಲ್ಲಿರುವ ಅರಳಿಕಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸೂರ್ಯನಮಸ್ಕಾರ ಹಾಕಿದ ನಂತರ ಅರ್ಚಕರ ಮೇಲೆ ಶ್ರೀ ಬೆಟ್ಟಳ್ಳಿ ಮಾರಮ್ಮ ತಾಯಿ ಬಂದು ಬೆಂಕಿಯ ಅಗ್ನಿಕುಂಡವನ್ನು ಪ್ರಧಾನ ಅರ್ಚಕರು ಎತ್ತಿ ಹಿಡಿದು ದೇವಸ್ಥಾನದ ಸುತ್ತಲು ಒಂದು ಬಾರಿ ಪ್ರದಕ್ಷಿಣೆ ಹಾಕಿದ ನಂತರ ಪ್ರಸಕ್ತ ಸಾಲಿನಲ್ಲಿ ಆಗಲಿರುವ ಮಳೆಯ ಪ್ರಮಾಣ ಹಾಗೂ ದೈವವಾಣಿ ಹೇಳುವುದು ವಾಡಿಕೆ. ಅದರಂತೆ ಪ್ರಸಕ್ತ ಸಾಲಿನ ಮುಂಗಾರು ಮತ್ತು ಮುಂಗಾರು ಮಳೆ ಎಷ್ಟು ಆಗಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಯಿತು.

ಶುಕ್ರವಾರ ಸಂಜೆ ತೆಪ್ಪೋತ್ಸವ: ಹನೂರು ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಮೊದಲನೆ ದಿನ ಜಾಗರ ಸಮರ್ಪಣೆ, ಎರಡನೇ ದಿನ ತಂಪು ಜ್ಯೋತಿ, ರಥೋತ್ಸವ, ಮೂರನೇ ದಿನ ದೊಡ್ಡ ಬಾಯಿ ಬೀಗ, ನಾಲ್ಕನೇ ದಿನ ಅಗ್ನಿಕುಂಡೋತ್ಸವ ಕಾರ್ಯಕ್ರಮಗಳು ನೆರವೇರಲಿದೆ.

ಆರ್.ಎಸ್.ದೊಡ್ಡಿ ಗ್ರಾಮವು ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಯ ಗಂಡನ ಮನೆ ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯ ಆರ್.ಎಸ್.ದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಸಂಜೆ ದೇವರ ಮೆರವಣಿಗೆ ನಡೆಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಆರ್ ಎಸ್ ದೊಡ್ಡಿ ಕೆರೆಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮವು ನೆರವೇರಲಿದೆ. ನಂತರ ಕೆರೆಯ ಮುಂಭಾಗದ ನಿವೇಶನದಲ್ಲಿ ಹಸಿರು ಚಪ್ಪರ ನಿರ್ಮಾಣ ಮಾಡಿ ಉಯ್ಯಾಲೋತ್ಸವದಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ಉತ್ಸವ ಮೂರ್ತಿಯನ್ನು ಇಟ್ಟು ರಾತ್ರಿಯಿಡಿ ಪೂಜೆ ಸಲ್ಲಿಸಿದ ನಂತರ ಶನಿವಾರ ಬೆಳಗ್ಗೆ ಶ್ರೀ ಬೆಟ್ಟಳ್ಳಿ ಮಾರಮ್ಮ ಉತ್ಸವ ಮೂರ್ತಿಯನ್ನು ಹನೂರು ಪಟ್ಟಣದ ಮಾರಮ್ಮ ದೇವಸ್ಥಾನಕ್ಕೆ ತಲುಪಿಸಿದ ನಂತರ ಜಾತ್ರೆಗೆ ತೆರೆ ಬೀಳಲಿದೆ.

ಜಿಲ್ಲಾಡಳಿತಕ್ಕೆ ಕೃತಜ್ಞತೆ: ಹನೂರು ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಯಶಸ್ವಿಯಾಗಲು ಸಹಕರಿಸಿದ ಚಾಮರಾಜನಗರ ಜಿಲ್ಲಾಡಳಿತ ಹನೂರು ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ದೇವಸ್ಥಾನದ ಸಮಿತಿ ವತಿಯಿಂದ ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ.

ಇದಲ್ಲದೆ ಕಳೆದ ನಾಲ್ಕು ದಿನಗಳಿಂದ ನಡೆದ ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಪಟ್ಟಣದ ಸರ್ವ ಸಮುದಾಯದ ಯಜಮಾನರು ಮುಖಂಡರುಗಳು ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಯಶಸ್ವಿಗೆ ಶ್ರಮಿಸಿದ ಹಿನ್ನೆಲೆ ದೇವಸ್ಥಾನದ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.

ದೇವಸ್ಥಾನದ ಪೂಜಾ ವಿಧಿ ವಿಧಾನಗಳನ್ನು ಅರ್ಚಕರಾದ ದೀಕ್ಷಿತ್, ಯಶ್ವಂತ್ ಸೇರಿದಂತೆ ಇತರೆ ಅರ್ಚಕರು ನೆರವೇರಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

12 mins ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

26 mins ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

38 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

2 hours ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

3 hours ago