ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮಾರ್ಚ್ 10ರಿಂದ 12ರ ಬೆಳ್ಳಿಗ್ಗೆ 6 ರವರೆಗೆ ಹನೂರು ಪಟ್ಟಣದಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರ ಮನವಿಯ ಮೇರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶ್ರೀರೂಪ ಅವರು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21(1)ರಡಿ ನೀಡಿರುವ ಅಧಿಕಾರವನ್ನು ಬಳಸಿಕೊಂಡು, ಮಾರ್ಚ್ 10ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 12ರ ಬೆಳಿಗ್ಗೆ 6 ಗಂಟೆಯವರೆಗೆ ಹನೂರು ಪಟ್ಟಣ ಹಾಗೂ ಅದರ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಇರುವ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ ಹಾಗೂ ಅಕ್ರಮ ದಾಸ್ತಾನು ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತದ ವತಿಯಿಂದ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…