ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಭಾನುವಾರ ಸಂಪ್ರದಾಯದಂತೆ ನೆರವೇರಿತು.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಬೇಡಗಂಪಣ ಸರದಿ ಅರ್ಚಕರ ಅಧ್ಯಕ್ಷತೆಯಲ್ಲಿ ಮಹದೇಶ್ವರನಿಗೆ ಮುಂಜಾನೆಯಿಂದಲೆ ಬಿಲ್ವಪತ್ರೆ, ಹಾಲು ಮೊಸರು ಸೇರಿದಂತೆ ಇನ್ನಿತರ ಅಭಿಷೇಕ ವಿಶೇಷ ಪೂಜೆ ಕಾರ್ಯಕ್ರಮಗಳು ದೂಪದ ಸೇವೆ ಮಹಾಮಂಗಳಾರತಿ ಸಂಭ್ರಮ ಸಡಗರದಿಂದ ನಡೆಯಿತು.
ವಿಶೇಷ ಉತ್ಸವಗಳು : ಭೀಮನ ಅಮಾವಾಸ್ಯೆ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಪೂಜಾ ಕಾರ್ಯಕ್ರಮಗಳ ಜೊತೆ ಹರಕೆ ಹೊತ್ತವರಿಂದ ಬೆಳಗ್ಗೆ 8:00 ಗಂಟೆ ಸಮಯದಲ್ಲಿ ಬೆಳ್ಳಿ ರಥೋತ್ಸವ ಹಾಗೂ ಹುಲಿವಾಹನ ಉತ್ಸವ ಮತ್ತು ರುದ್ರಾಕ್ಷಿ ಮಂಟಪೋತ್ಸವ ಮಲೆ ಮಹದೇಶ್ವರ ಉತ್ಸವ ಬಸವ ಮುಡಿಸೇವೆ ದೂಪದ ಸೇವೆ ಪಂಜಿನ ಸೇವೆ ಹಾಗೂ ಜನರಿಂದ ಉರುಳು ಸೇವೆ ಸಲ್ಲಿಸಿ ಉಘೇ ಮಾದಪ್ಪ ಉಘೇ ಎಂದು ನಾಮಸ್ಮರಣೆ ಮಾಡುವ ಮೂಲಕ ಜಯ ಘೋಷ ಹಾಕಿದರು.
ಗಮನಸೆಳೆದ ವಿಶೇಷ ಅಲಂಕಾರ : ಮಲೆ ಮಾದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ತಮಿಳುನಾಡಿನ ಉದ್ಯಮಿ ರಮೇಶ್ ಗೌಡ ದೇವಾಲಯದ ಪ್ರಾರಂಭ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷ ಹೂವಿನ ಅಲಂಕಾರ ಮತ್ತು ತೆಂಗಿನಕಾಯಿ ತರಕಾರಿ ವಿವಿಧ ಫಲ ಪುಷ್ಪಗಳಿಂದ ಅಲಂಕೃತ ಜನರ ಗಮನ ಸೆಳೆಯಿತು.
ವಿಶೇಷ ದಾಸೋಹ : ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಭೀಮನ ಅಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಬರುವ ಜನರಿಗೆ ಬೆಂಗಳೂರಿನ ಉದ್ಯಮಿ ಶೋಭಾ ಮಹಾದೇವಸ್ವಾಮಿ ಕುಟುಂಬ ವರ್ಗದವರು ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸುವ ಮೂಲಕ ಬೆಳಗಿನ ಉಪಹಾರ ಉಪ್ಪಿಟ್ಟು ಕೇಸರಿಬಾತ್ ಮಧ್ಯಾಹ್ನ ಉಪಹಾರ ಅನ್ನ ಸಾಂಬಾರು ಪರಂಗಿಹುಳಿ, ಪಾಯಸ ವಿಶೇಷ ದಾಸೋಹ ವ್ಯವಸ್ಥೆ ಭಕ್ತಾದಿಗಳಿಗೆ ಕಲ್ಪಿಸಿದ್ದರು ಮತ್ತು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದಲೂ ಜನರಿಗೆ ಯಾವುದೇ ಲೋಪದೋಷಗಳು ಇಲ್ಲದಂತೆ ದಾಸೋಹದಲ್ಲಿ ಬೆಳಗಿನ ಉಪಹಾರ ಮತ್ತು ಅನ್ನ ಸಾಂಬಾರು ಪಾಯಸ ಬೂಂದಿ, ಕಡ್ಲೆಹುಳಿ ರಸಂ ಮಜ್ಜಿಗೆ ಇನ್ನಿತರ ವಿಶೇಷ ದಾಸೋಹವನ್ನು ಜನರಿಗೆ ವ್ಯವಸ್ಥೆ ಕಲ್ಪಿಸಿದ್ದರು.
ಜನ ಸಮೂಹ : ಭೀಮನ ಅಮಾವಾಸ್ಯೆ ಪ್ರಯುಕ್ತ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ತಮಿಳುನಾಡಿನಿಂದಲೂ ಸಹ ಲಕ್ಷಾಂತರ ಜನರು ಆಗಮಿಸುವ ಮೂಲಕ ಸರದಿ ಸಾಲಿನಲ್ಲಿ ನಿಂತು ಮಲೆ ಮಹದೇಶ್ವರರ ದರ್ಶನ ಪಡೆದರು. ಶ್ರೀ ಕ್ಷೇತ್ರದಲ್ಲಿ ಎತ್ತ ನೋಡಿದರೂ ಮಾದೇಶ್ವರನ ಬೆಟ್ಟದಲ್ಲಿ ಭಾರೀ ಜನ ಸಮೂಹವೇ ನೆರದಿತ್ತು.
ಭೀಮನ ಅಮಾವಾಸ್ಯೆ ಹಾಗೂ ಶ್ರಾವಣ ಮಾಸದ ಐದು ದಿನಗಳು ನಡೆಯುವ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಪ್ರಾಧಿಕಾರ ಅಭಿವೃದ್ಧಿ ವತಿಯಿಂದ ವಿಶೇಷವಾಗಿ ದಾಸೋಹ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ . ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಬರುವಂತಹ ಭಕ್ತಾದಿಗಳು ಪ್ಲಾಸ್ಟಿಕ್ ತ್ಯಜಿಸಿ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಭಕ್ತಾದಿಗಳು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಸ್ಪಂದಿಸಬೇಕಿದೆ.
ಮೂರು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್: ಭೀಮನ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ದ್ವಿಚಕ್ರ ವಾಹನ, ಕಾರು ಹಾಗೂ ಬಸ್ ಗಳಲ್ಲಿ ಆಗಮಿಸಿದ್ದರು. ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಡುವ ಮಾರ್ಗ ಮಧ್ಯದ ಎಂಟನೇ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಸವಾರರು ಗಾಯಗೊಂಡಿದ್ದ ಹಿನ್ನೆಲೆ ಮೂರು ಗಂಟೆಗಳಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿ ಜನರು ರಸ್ತೆಯಲ್ಲಿಯೇ ಕಾಲ ಕಳೆಯುವಂತಾಯಿತು ಕೆಲವರು ನಡೆದುಕೊಂಡೇ ಶ್ರೀ ಕ್ಷೇತ್ರದತ್ತ ದೌಡಾಯಿಸಿದರು.
ಡಕೋಟಾ ಎಕ್ಸ್ಪ್ರೆಸ್ ಬಸ್ ತಳ್ಳಿದ ಭಕ್ತರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ ಕೆಎಸ್ಆರ್ ಟಿಸಿ ಬಸ್ ಸಮರ್ಪಕ ನಿರ್ವಹಣೆ ಇಲ್ಲದೆ ಇದ್ದಿದ್ದರಿಂದ ಬಸ್ ಬೋರೆ ಏರಲು ಸಾಧ್ಯವಾಗದೆ ಪ್ರಯಾಣಿಕರನ್ನು ಇಳಿಸಿ ಪ್ರಯಾಣಿಕರೇ ಬಸ್ ತಳ್ಳಿದ ನಂತರ ಬಸ್ ಶ್ರೀ ಕ್ಷೇತ್ರದತ್ತ ತೆರಳಿದ ಪ್ರಸಂಗ ನಡೆಯಿತು.
ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ ಡಿವೈಎಸ್ಪಿ: ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ 3 ಗಂಟೆಗಳಿಗೂ ಹೆಚ್ಚು ಕಾಲ ಟ್ರಾಫಿಕ್ ಉಂಟಾಗಿದ್ದರಿಂದ ಹತ್ತು ಕಿಲೋಮೀಟರ್ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆ ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದ್ರರವರೇ ಟ್ರಾಫಿಕ್ ಕ್ಲಿಯರ್ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.
ವಿಐಪಿ ಗಳಿಗೆ ಪಾಸ್ ವ್ಯವಸ್ಥೆ: ಭೀಮನ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟಕ್ಕೆ ಜನಪ್ರತಿನಿಧಿಗಳು ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಹಿನ್ನೆಲೆ ಪ್ರಾಧಿಕಾರದ ವತಿಯಿಂದ ವಿಶೇಷ ಪಾಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಜನರು ಆಗಮಿಸುವ ನಿರೀಕ್ಷೆಯಿದ್ದ ಹಿನ್ನೆಲೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಲ್ಲದೆ ಪ್ರಾಧಿಕಾರದ ಸಿಬ್ಬಂದಿಗಳನ್ನು ಸಹ ನೇಮಕ ಮಾಡಿ ತಳ್ಳಾಟ ನೂಕಾಟ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿತ್ತು.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…