Mysore
17
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಲೆ ಮಹದೇಶ್ವರ ಬೆಟ್ಟದಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗ್‌ ಪ್ಲಾನ್‌

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗ್‌ ಪ್ಲಾನ್‌ ರೂಪಿಸಲಾಗಿದೆ.

ತ್ಯಾಜ್ಯ ನಿರ್ವಹಣೆಗೆಂದೇ ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ ಎಂಬ ಯೋಜನೆಯ ಅನುಷ್ಠಾನಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಈ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರು, ಮೈಸೂರು ಕಾವೇರಿ ಪ್ರಾದೇಶಿಕ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಸಹಿ ಹಾಕಿದ್ದಾರೆ.

ಇದು ಮೂರು ವರ್ಷಗಳ ಯೋಜನೆಯಾಗಿದ್ದು, ಮಲೆ ಮಹದೇಶ್ವರ ಬೆಟ್ಟವನ್ನು ಹಸಿರುಮಯವಾಗಿಸಲು ಹಾಗೂ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡುವ ಉದ್ದೇಶ ಹೊಂದಿದೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಲಕ್ಷಾಂತರ ಮಂದಿ ಸಾರ್ವಜನಿಕರು ಅಲ್ಲಲ್ಲಿ ಕಸ ಎಸೆದು ಹೋಗುತ್ತಾರೆ.

ಈ ಕಸವನ್ನೆಲ್ಲಾ ಸಮರ್ಪಕವಾಗಿ ನಿರ್ವಹಣೆ ಮಾಡಲು ಈ ಯೋಜನೆ ರೂಪಿಸಲಾಗಿದ್ದು, ಎಲ್ಲರಿಂದ ಪ್ರಶಂಸೆ ವ್ಯಕ್ತವಾಗಿದೆ.

 

Tags:
error: Content is protected !!