Mysore
23
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಚಾಮರಾಜನಗರದಲ್ಲಿ ಸುನೀಲ್‌ ಬೋಸ್‌ಗೆ ಭರ್ಜರಿ ಗೆಲುವು

ಚಾಮರಾಜನಗರ:ಮೀಸಲು ಕ್ಷೇತ್ರ ಚಾಮರಾಜನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ದಾಖಲೆಯ ಗೆಲುವು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ತನ್ನ ಭದ್ರಕೋಟೆಯನ್ನು ಹಿಂಪಡೆಯುವಲ್ಲಿ ಯಶಸ್ಸು ಕಂಡಿದೆ.

ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ 188706 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುನೀಲ್‌ ಬೋಸ್‌ ಒಟ್ಟು 751671 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಎಸ್.‌ ಬಾಲರಾಜು ಅವರು 562965 ಮತ ಪಡೆದು ಪರಭಾವಗೊಂಡರು.

ಬಿಎಸ್‌ಪಿ ಅಭ್ಯರ್ಥಿ ಕೃಷ್ಣಮೂರ್ತಿ ಕೇವಲ 15903 ಮತಗಳಿಗೆ ತೃಪ್ತಿಪಟ್ಟಿಕೊಂಡಿದ್ದಾರೆ. ಉಳಿದವರೆಲ್ಲರೂ ಠೇವಣಿ ಕಳೆದುಕೊಂಡಿದ್ದು, ನೋಟಾಗೆ ೮೦೮೪ ಮತಗಳು ಬಿದ್ದಿವೆ.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಿವಂಗತ ವಿ.ಶ್ರೀನಿವಾಸ್‌ಪ್ರಸಾದ್‌ ಬಿಜೆಪಿಯಿಂದ ಗೆದ್ದಿದ್ದರು. ಕಾಂಗ್ರೆಸ್‌ನ ದಿವಂಗತ ಆರ್.ಧ್ರುವನಾರಾಯಣ್‌ ಅವರು ಕೇವಲ 1700 ಮತಗಳ ಅಂತರದಿಂದ ಪರಾಭಾವಗೊಂಡಿದ್ದರು.

Tags:
error: Content is protected !!