ಕೊಳ್ಳೇಗಾಲ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ಹನೂರು ತಾಲ್ಲೂಕಿನ ಬೈಲೂರು ಗ್ರಾಮದ ಬಳಿ ಜರುಗಿದೆ.
ಹನೂರು ತಾಲ್ಲೂಕಿನ ಅರ್ಧನಾರಿಪುರದ ಗ್ರಾಮದ ಕೂಲಿ ಕಾರ್ಮಿಕ ಜಡೆಯಪ್ಪ(30) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಅದೇ ಗ್ರಾಮದ ಕುಂಭ ಹಾಗೂ ಮತ್ತೊಂದು ಬೈಕ್ ಸವಾರ ತಮಿಳುನಾಡು ಜೋಗುಪುರ ಮಾದೇಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:- ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ತಿರಂಗಾಯಾತ್ರೆ ಆಯೋಜನೆ: ಮಾಜಿ ಶಾಸಕ ಎಲ್.ನಾಗೇಂದ್ರ
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಶವವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.





