Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಗುಂಡ್ಲುಪೇಟೆಯಲ್ಲಿ ಭೀಕರ ಅಪಘಾತ: ದಂಪತಿ, ಮಗು ಸಾವು

ಗುಂಡ್ಲುಪೇಟೆ: ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.

ಕೇರಳದ ವಯನಾಡಿದ ದಾನೇಶ್‌, ಅಂಜು ಹಾಗೂ ಮಗ ಇಶಾನ್‌ ಕೃಷ್ಣ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ  ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮೂವರು ಒಂದೇ ಬೈಕ್‌ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದಾಗ ಮಣ್ಣು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್‌ ಹಿಂಬದಿಯಿಂದ ಗುದ್ದಿದೆ. ಅಪಘಾತದ ರಭಸಕ್ಕೆ ಮೂವರ ದೇಹಗಳು ಛಿದ್ರ ಛಿದ್ರವಾಗಿವೆ.

ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

Tags: