ಗುಂಡ್ಲುಪೇಟೆ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.
ಕೇರಳದ ವಯನಾಡಿದ ದಾನೇಶ್, ಅಂಜು ಹಾಗೂ ಮಗ ಇಶಾನ್ ಕೃಷ್ಣ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೂವರು ಒಂದೇ ಬೈಕ್‌ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದಾಗ ಮಣ್ಣು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಹಿಂಬದಿಯಿಂದ ಗುದ್ದಿದೆ. ಅಪಘಾತದ ರಭಸಕ್ಕೆ ಮೂವರ ದೇಹಗಳು ಛಿದ್ರ ಛಿದ್ರವಾಗಿವೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…