ಗುಂಡ್ಲುಪೇಟೆ: ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.
ಕೇರಳದ ವಯನಾಡಿದ ದಾನೇಶ್, ಅಂಜು ಹಾಗೂ ಮಗ ಇಶಾನ್ ಕೃಷ್ಣ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೂವರು ಒಂದೇ ಬೈಕ್ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದಾಗ ಮಣ್ಣು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಹಿಂಬದಿಯಿಂದ ಗುದ್ದಿದೆ. ಅಪಘಾತದ ರಭಸಕ್ಕೆ ಮೂವರ ದೇಹಗಳು ಛಿದ್ರ ಛಿದ್ರವಾಗಿವೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ನವದೆಹಲಿ: ಕರ್ನಾಟಕ ಸೇರಿದಂತೆ ದಕ್ಷಿಣದ ಐದು ರಾಜ್ಯಗಳಿಗೆ ಹೆಚ್ಚುವರಿ ಭಾರತ್ ರೈಸ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್…
ಮೈಸೂರು: ಮೈಸೂರು ಅರಮನೆ ಕುರಿತ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಹಾರಾಜರು ಅರಮನೆ…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳುವ ಭಕ್ತರ ಗಮನಕ್ಕೆ! ದೀಪಾವಳಿ ಜಾತ್ರೆಯ ಹಿನ್ನೆಲೆಯಲ್ಲಿ ನವೆಂಬರ್ 11ರವರೆಗೆ ರಾತ್ರಿ ವೇಳೆ ಕಾಲ್ನಡಿಗೆ…
ಮಂಡ್ಯ: ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಹತ್ತು ದಿನಗಳಲ್ಲಿ ನೀರಿನ ಮಟ್ಟ ಆರು ಅಡಿ…
ಬೆಂಗಳೂರು: ನವೆಂಬರ್ 13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ…
ರೈತರ ಹೆಸರನ್ನು ಮುಂದಿಟ್ಟುಕೊಂಡು ಸರ್ಕಾರ ಹಾಲಿನ ದರ ಹೆಚ್ಚಳದ ಘೋಷಣೆ ಮಾಡುತ್ತದೆ. ಆದರೆ ಆ ಘೋಷಣೆಯ ಪೂರ್ಣ ಲಾಭ ಮಾತ್ರ…