ಚಾಮರಾಜನಗರ: ರಸ್ತೆ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆಯೊಂದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.
ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ ಹಾಗೂ ಮಲ್ಲೇಶ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ.
ಧಾರಾಕಾರ ಮಳೆ ಸುರಿಯುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಜೋತುಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೂರ್ವ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು, ಚೆಸ್ಕಾಂ ವತಿಯಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.