ಚಾಮರಾಜನಗರ: ಪೊಲೀಸ್ ಠಾಣೆಯ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸ್ ಠಾಣೆ ಆವರಣದಲ್ಲೇ ನಿಲ್ಲಿಸಿದ್ದ ಬೈಕ್ ಕಳುವಾಗಿದ್ದ ಬಗ್ಗೆ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಎಂಬುವವರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು, ಠಾಣೆಯ ಸಿಸಿ ಟಿವಿ ಕ್ಯಾಮರಾ ಪರಿಶೀಲಿಸಿದ್ದಾರೆ.
ಈ ವೇಳೆ ಇಬ್ಬರು ಖದೀಮರು ಕಾಂಪೌಂಡ್‌ನಿಂದ ಜಿಗಿದು, ಗೇಟ್ ಬೀಗವನ್ನು ರಾಡ್‌ನಿಂದ ಜಿಗಿದು ಬೈಕ್ ಕಳ್ಳತನ ಮಾಡಿದ್ದರು.
ಸಿಸಿ ಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳಾದ ಇರ್ಫಾನ್ ಚೋಟು ಹಾಗೂ ಅರ್ಫಾಝ್ ಖಾನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…