ಚಾಮರಾಜನಗರ: ಇಲ್ಲಿನ ಬಿಳಿಗಿರಿರಂಗ ಬೆಟ್ಟದಿಂದ ಪೂಜೆ ಮುಗಿಸಿ ಹಿಂತಿರುಗುತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು(ಜೂ.1) ಮೈಸೂರು ಜಿಲ್ಲೆಯ ನಂಜೂನಗೂಡು ಮೂಲದ ಕುಟುಂಬವೊಂದು ಪೂಜೆಗಾಗಿ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳಿತ್ತು. ಪೂಜೆ ಮೂಗಿಸಿ ಹಿಂತಿರುವಾಗ ಗವಿಬೋರೆ ಹತ್ತಿರ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ. ಘಟನೆಯಲ್ಲಿ 16ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ಪಲ್ಟಿಯಾಗುತ್ತಿದ್ದಂತೆ ಬಸ್ ಚಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಯಳಂದೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…