ಚಾಮರಾಜನಗರ: ಬಳ್ಳಾರಿ ಆಸ್ಪತ್ರೆಗೆ ಇಂದು (ಡಿಸೆಂಬರ್ 7) ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು.
ತಪ್ಪಿತಸ್ಥರ ಮೇಲೆ ಕ್ರಮ
ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಗದಗ: ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ…
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್…
ಮೈಸೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು…
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ…
ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ.…