ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಎಚ್.ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್‌ಗೆ ಟಿಕೆಟ್ ಘೋಷಣೆಯಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಇದೆ ಎಂದು ಟೀಕಿಸಿದ್ದರು. ಈ ಬಗ್ಗೆ ಮೈಸೂರು ಜಿಲ್ಲ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಟಾಂಗ್ ನೀಡಿದ್ದಾರೆ.
ಕೊಳ್ಳೆಗಾಲದಲ್ಲಿ ಮಾತನಾಡಿದ ಸಚಿವ, ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವುದಕ್ಕೆ ಅವಕಾಶವಿದೆ. ಯಾರು ಜನಪರ ಇದ್ದಾರೆ ಅವರನ್ನ ತಡೆಯಲು ನಮಗೆ ಅಧಿಕಾರವಿಲ್ಲ. ವಿಜಯೇಂದ್ರ ಕುಟುಂಬದವರೇ ಕುಟುಂಬ ರಾಜಕಾರಣ ಮಾಡುತ್ತಿರುವಾಗ ನಮ್ಮನ್ನು ಪ್ರಶ್ನಿಸಲು ಅವರಿಗೆ ಯಾವ ನೈತಿಕತೆ ಇದೆ ಎಂದು ಎಚ್.ಸಿ ಮಹದೇವಪ್ಪ ಪ್ರಶ್ನಿಸಿದ್ದಾರೆ.





