ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪ್ಲ್ಯಾನ್ ಸಕ್ಸಸ್ ಆಗಿದ್ದು, ಗೆಲುವಿನ ಹೊಸ್ತಿನಲ್ಲಿದ್ದ ಕಾಂಗ್ರೆಸ್ ಮುಗ್ಗರಿಸಿ ಬಿದ್ದಿದೆ.
31 ಸದಸ್ಯರ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ನ ಮೂವರು ಸದಸ್ಯರು ಗೈರಾಗಿದ್ದರು. ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ ಏರಿದೆ.
ಬಿಜೆಪಿಯ ಸುರೇಶ್ ನಾಯಕ್ ಆಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾಗಿದ್ದಾರೆ.
ನಗರಸಭೆಯ 31 ಸದಸ್ಯರು ಹಾಗೂ ಸಂಸದ, ಶಾಸಕರ ಬಲದೊಂದಿಗೆ 33 ಸದಸ್ಯರ ಬಲವನ್ನು ಹೊಂದಿತ್ತು. ಓರ್ವ ಬಿಎಸ್‌ಪಿ ಸದಸ್ಯ ಹೆಚ್ಚು ಸಭೆಗೆ ಗೈರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸದಸ್ಯತ್ವ ರದ್ದುಗೊಳಿಸಿದ್ದರು.
ಬಿಜೆಪಿಯ ಸುರೇಶ್ ಹಾಗೂ ಮಮತಾ 15 ಮತಗಳನ್ನು ಪಡೆದು ಅಧ್ಯಕ್ಷ-ಉಪಾಧ್ಯಕ್ಷರಾಗಿದ್ದಾರೆ. ಮೂವರು ಕಾಂಗ್ರೆಸ್ ಸದಸ್ಯರು ಕೂಡ ಸಭೆಗೆ ಆಗಮಿಸಿ ಬಿಜೆಪಿ ಪರವಾಗಿ ಕೈ ಎತ್ತಿದರು.
ಪರಿಣಾಮ ಚಾಮರಾಜನಗರ ನಗರಸಭೆ ಬಿಜೆಪಿ ಪಾಲಾಗಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಪ್ಲ್ಯಾನ್ ಠುಸ್ ಆಗಿದೆ.
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…