ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಅಂತರಗಂಗೆ ಹೊಸ ಕೊಳದಲ್ಲಿ ಸುಮಾರು 40-45 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪರಿಚಿತ ಶವದ ಕೈ ಮೇಲೆ ರಾಣಿ ಎಂದು ಹಾಗೂ ಎದೆಯ ಮೇಲೆ ಡಾ ಅಂಬೇಡ್ಕರ್ ಎಂದು ಬರೆದಿರುವ ಟ್ಯಾಟೂ ಪತ್ತೆಯಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿ ಯಾರೆಂದು ತಿಳಿದುಬರಬೇಕಿದೆ.





