ಚಾಮರಾಜನಗರ

ಕೊಳ್ಳೇಗಾಲ | ನದಿಯಿಂದ ಶವ ಹೊರಕ್ಕೆ ; ಸಹಪಾಠಿಗಳ ವಿರುದ್ಧ ಎಫ್‌ಐಎರ್‌

ಕೊಳ್ಳೇಗಾಲ : ನೆನ್ನೆ ತಾಲ್ಲೂಕಿನ ಶಿವನಸಮುದ್ರ – ದರ್ಗಾದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ದಯಾನಂದ ಸಾಗರ್ ಕಾಲೇಜು ವೈದ್ಯಕೀಯ ವಿದ್ಯಾರ್ಥಿ ನಂದನ್ ಗೌಡ(19) ಶವವನ್ನು ಅಗ್ನಿಶಾಮಕ ದಳದವರು ಹಾಗೂ ನುರಿತ ಈಜುಪಟುಗಳು ನದಿಯಿಂದ ಹೊರತೆಗೆದಿದ್ದಾರೆ.

ಈ ಸಂಬಂಧ ಮೃತ್ತನ ತಂದೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದ ವಾಸಿ ಹಾಗೂ ಬೆಂಗಳೂರು ಹಾಲು ಒಕ್ಕೂಟದ ಮ್ಯಾನೇಜಿಂಗ್ ಡೈರೆಕ್ಟರ್ ಶಿವಶಂಕರ್ ದೂರು ಸಲ್ಲಿಸಿ ನನ್ನ ಮಗ ಈಜಲು ಹೋಗಿ ಸತ್ತಿಲ್ಲ, ಬಲಾತ್ಕಾರವಾಗಿ ಇವನನ್ನು ಕರೆದುಕೊಂಡು ಹೋಗಿ ರ್ಯಾಗಿಂಗ್ ಮಾಡಿ ಸಾಯಿಸಿದ್ದಾರೆ. ಈ ಕಾರಣಕ್ಕಾಗಿ ನನ್ನ ಮಗನನ್ನು ಬಲಾತ್ಕಾರವಾಗಿ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿಸಿ ರ್ಯಾಗಿಂಗ್ ಮಾಡಿ ಸಾವಿಗೆ ಕಾರಣ ಆರು ಮಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲಿಖಿತ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸ್ ಠಾಣೆಯವರು ಈಬಗ್ಗೆ ತನಿಖೆ ನಡೆಸುತ್ತಿದ್ದು ದೂರಿನಲ್ಲಿ ತಿಳಿಸಿರುವಂತೆ ಆರೋಪ ಸಾಬೀತಾದರೆ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.
ಚಾ.ನಗರ ಜಿಲ್ಲಾಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಶಾಂತಿನಗರ ತನ್ಮಯ್, ಬೆಂಗಳೂರು ಅಮೃತಹಳ್ಳಿ ತುಷಾರ್, ಶಿವಮೊಗ್ಗ ಪವನ್, ಬೆಂಗಳೂರು ವಿಜಯನಗರ ಪ್ರಫುಲ್, ಬೆಂಗಳೂರು ರಜತ್ , ಕೊಡಗು ಸೋಮವಾರಪೇಟೆಯ ಚತುರ್ ಇವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಇವರ ಮೇಲೆ ಆರೋಪ ಮೇಲ್ನೋಟಕ್ಕೆ ಸಾಬೀತಾದರೆ ಇವರು ಬಂಧಿಸುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

8 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

8 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

8 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

8 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

8 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

9 hours ago