ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ಹೊರವಲಯದ ತಮಿಳುನಾಡು ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೊರೊ ವಾಹನವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.
ತಮಿಳುನಾಡಿನ ಸೇಲಂ ಜಿಲ್ಲೆಯ ನಾಲ್ವರು ಭಕ್ತರು ತಮ್ಮ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದು ಪೂಜೆ ನೆರವೇರಿಸಿ, ಪೂಜೆಯ ಬಳಿಕ ವಾಪಸ್ ಹೋಗುತ್ತಿರುವ ವೇಳೆ, ಮೇಟೂರು ಮುಖ್ಯರಸ್ತೆಯಲ್ಲಿ ವಾಹನದ ಚಾಲಕನ ನಿಯಂತ್ರಣ ತಪ್ಪಿ ಬೋಲೊರೊ ಪಲ್ಟಿಯಾಗಿ ಬಿದ್ದಿದೆ.
ಅಪಘಾತದ ವೇಳೆ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ದಾರಿಹೋಕರ ಸಹಕಾರದಿಂದ ಗಾಯಾಳುಗಳನ್ನು ಮೆಟ್ಟೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಘಟನೆಯಲ್ಲಿ ಪ್ರಾಣಹಾನಿಯಾಗಿಲ್ಲ. ಘಟನೆಯ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.





