ಚಾಮರಾಜನಗರ

ನಾಗಮಲೆಗೆ ತೆರಳಲು ಅರಣ್ಯ ಇಲಾಖೆ ವೆಬ್‌ಸೈಟ್‌ನಲ್ಲಿ ನೋಂದಣಿ ಪ್ರಾರಂಭ

ಹನೂರು: ತಾಲೂಕಿನ ಪ್ರಸಿದ್ಧ ಚಾರಣ ಪ್ರದೇಶ ನಾಗಮಲೆಗೆ ತೆರಳಲು ಇಚ್ಛಿಸುವ ಚಾರಣ ಪ್ರಿಯರಿಗೆ ಅರಣ್ಯ ಇಲಾಖೆ ಸಂತಸದ ಸುದ್ದಿಯೊಂದನ್ನು ನೀಡಿದೆ.

ಅರಣ್ಯ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಚಾರಣ ತೆರಳಲು ಬುಕಿಂಗ್ ಪ್ರಾರಂಭಿಸಲಾಗಿದ್ದು ಚಾರಣ ಪ್ರಿಯರು ಮತ್ತು ಪ್ರವಾಸಿಗರು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.

ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಬಹುತೇಕ ಪ್ರವಾಸಿಗರು ನಾಗಮಲೆಗೆ ಹೋಗಿ ಬರುವುದು ಸಂಪ್ರದಾಯವಾಗಿತ್ತು. ಜಾತ್ರಾ ಮಹೋತ್ಸವ, ಹಬ್ಬ ಹರಿದಿನ ಸೇರಿದಂತೆ ಇನ್ನಿತರ ದಿನಗಳಲ್ಲಿ ಭಕ್ತಾದಿಗಳು ದಿನದ 24 ಗಂಟೆಯೂ ನಾಗಮಲೆಗೆ ಹೋಗಿ ಬರುತ್ತಿದ್ದರು.

ಆದರೆ ನಾಗಮಲೆಗೆ ಹೋಗುವಾಗ ಹಾಗೂ ಬರುವಾಗ ಕಾಡು ಪ್ರಾಣಿಗಳು ದಾಳಿ ನಡೆಸಿದ ಪರಿಣಾಮ ಕೆಲ ಪ್ರವಾಸಿಗರು ಮೃತಪಟ್ಟಿದ್ದರಿಂದ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಇದರ ಅನ್ವಯ ಫೆಬ್ರವರಿ ಐದರಿಂದ ನಾಗಮಲೆಗೆ ಜೀಪ್ ಮುಖಾಂತರ ಹಾಗೂ ಪಾದಯಾತ್ರೆಯ ಮೂಲಕ ಪ್ರವಾಸಿಗರು ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ,ತುಳಸಿ ಕರೆ ಗ್ರಾಮದ ಹಲವು ಯುವಕರು ಜೀಪ್ ಸಂಚಾರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದರು. ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಗ್ರಾಮದ ಜನತೆ ರೊಚ್ಚಿಗೆದ್ದು ಮತಯಂತ್ರವನ್ನು ಧ್ವಂಸಗೊಳಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಿಣಾಮ 50ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿ ಶಿಕ್ಷೆ ಅನುಭವಿಸಿ ಗ್ರಾಮಕ್ಕೆ ವಾಪಸ್ ತೆರಳಿದ್ದಾರೆ.

ಅಕ್ಟೋಬರ್ ೬ರಿಂದ ನಾಗಮಲೆಗೆ ಚಾರಣ ತೆರಳಲು ಅರಣ್ಯ ಇಲಾಖೆಯ ವೆಬ್ ಸೆಟ್ www.aranyavihaara.karanataka.gov.inಗೆ ಭೇಟಿ ನೀಡಿ ನೋಂದಾಯಿಸಿಕೊಂಡು ನಂತರ ದಿನಾಂಕ ನಮೂದಿಸಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಭಕ್ತಾದಿಗಳಿಗೆ ಹಾಗೂ ಚಾರಿಣಿಕರಿಗೆ ಬೆಳಗ್ಗೆ ೬ ರಿಂದ ೧೦ ಗಂಟೆಯ ಸ್ಲಾಟನ್ನು ಬುಕಿಂಗ್ ಅವಕಾಶ ನೀಡಲಾಗಿದ್ದು. ಒಬ್ಬರಿಗೆ 200 ರೂ ನಿಗದಿ ಮಾಡಲಾಗಿದ್ದು ಜಿಎಸ್‌ಟಿ ಸಹ ಸೇರಿಕೊಳ್ಳಲಿದೆ. ಚಾರಣ ಪಥವು ಸುಮಾರು 14 ಕಿಲೋಮೀಟರ್ ಗಳಿದ್ದು ಹಳೆಯೂರು ಗೇಟ್ ನಿಂದ ಪ್ರಾರಂಭಿಸಿ ನಾಗಮಲೆ ತಲುಪಿ ಮತ್ತೆ ವಾಪಸ್ ಹಳೆಯೂರು ಗೇಟ್ ನಲ್ಲಿ ಚಾರಣವು ಮುಕ್ತಾಯಗೊಳ್ಳಲಿದೆ. ಚಾರಣಿಗರ ಜೊತೆಗೆ ಅರಣ್ಯ ಇಲಾಖೆಯ ಒಬ್ಬರು ಜೊತೆ ಇದ್ದು ಮಾಹಿತಿ ಒದಗಿಸಲಿದ್ದಾರೆ.

ಅರಣ್ಯ ಇಲಾಖೆಯು ಪ್ರಾಯೋಗಿಕವಾಗಿ ಒಂದು ದಿನಕ್ಕೆ 200 ಜನರಿಗೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಜನರಿಗೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ಇದಲ್ಲದೆ ಅರಣ್ಯ ಸಚಿವರ ನಿರ್ದೇಶನದ ಮೇರೆಗೆ ಏಕ ಬಳಕೆಯ ಪ್ಲಾಸ್ಟಿಕನ್ನು ವನ್ಯ ಧಾಮದಲ್ಲಿ ನಿಷೇಧಿಸಲಾಗಿರುವುದರಿಂದ ಬರುವ ಪ್ರವಾಸಿಗರು ಅರಣ್ಯ ಇಲಾಖೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಇನ್ನು ಇಂಡಿಗನತ್ರ ಗ್ರಾಮದಲ್ಲಿರುವ ಜೀಪ್‌ಗಳಿಗೆ ವಿಮೆ, ಸಂಚಾರಕ್ಕೆ ಯೋಗ್ಯವಿಲ್ಲದೆ ಇರುವುದರಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗುವುದಕ್ಕೆ ನಿರ್ಬಂಧ ಮುಂದುವರಿಸಲಾಗಿದೆ.

ಪ್ರವಾಸಿಗರಿಗೆ ಯಾವುದಾದರೂ ತೊಡಕು ಉಂಟಾದರೆ ಅಥವಾ ಅನುಮಾನವಿದ್ದಲ್ಲಿ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಲಯ ವಲಯ ಅರಣ್ಯಾಧಿಕಾರಿ 9481995510, ಡಿ ಆರ್ ಎಫ್ 9481995527, ಪಾಲಾರ್ ಆರ್ ಎಫ್ 9481995512, ಡಿ ಆರ್ ಎಫ್ ಓ 9481995531, ಗಸ್ತು ಅರಣ್ಯಪಾಲಕ ಇಂಡಿಗನತ್ತ 9481995597 ಸಂಖ್ಯೆಗೆ ದೂರವಾಣಿ ಮುಖಾಂತರ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.

ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ಬರುವ ಶ್ರೀ ನಾಗಮಲೆಗೆ ಕಳೆದ ಏಳು ತಿಂಗಳನಿಂದ ಜೀಪ್ ಹಾಗೂ ಪಾದಯಾತ್ರೆಯ ಮೂಲಕ ಭಕ್ತಾದಿಗಳು ತೆರಳಲು ನಿರ್ಬಂಧ ವಿಧಿಸಲಾಗಿತ್ತು. ಇದೀಗ ಅರಣ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಚಾರಣ ತೆರಳಲು ವೆಬ್ ಸೆಟ್ ನಲ್ಲಿ ನೋಂದಾವಣೆ ಮಾಡಿಕೊಂಡು ಪ್ರತಿದಿನ 200 ಚಾರಣಿಕರು ಹೋಗಲು ಅವಕಾಶ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ವನ್ಯ ಪ್ರಾಣಿಗಳಿಗೆ ತೊಂದರೆಯಾಗದಂತೆ ಚಾರಣಿಕರು ಹಾಗೂ ಪ್ರವಾಸಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವದು.
– ಡಾ.ಸಂತೋಷ್ ಕುಮಾರ್
ಡಿಪಿಎಫ್ ಮಲೆ ಮಹದೇಶ್ವರ ವನ್ಯಜೀವಿ ಧಾಮ

 

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

42 seconds ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

1 hour ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago