ಚಾಮರಾಜನಗರ

ಮಾದಪ್ಪನ ಬೆಟ್ಟದಲ್ಲಿ ರೂಂ ಬೇಕಾ!! ಮೊಬೈಲ್ʼನಲ್ಲೇ ಬುಕ್ ಮಾಡಿ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕಾಗಿ ಶೇ 70ರಷ್ಟು ಮುಂಗಡ ಬುಕಿಂಗ್ (ಆನ್ಲೈನ್) ಮಾಡಲು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದ್ದು ಭಕ್ತಾದಿಗಳು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಸತಿಗೃಹಗಳನ್ನು ನಿರ್ಮಾಣ ಮಾಡಲಾಗಿದೆ. ಈ ಹಿಂದೆಯೂ ಮಂಗಡ ಬುಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ತಾಂತ್ರಿಕ ದೋಷದಿಂದ ಕೆಲವು ತಿಂಗಳ ಕಾಲ ಸ್ಥಗಿತವಾಗಿತ್ತು. ಇದೀಗ ಶೇ 70ರಷ್ಟು ಮುಂಗಡ ಬುಕಿಂಗ್ ಮಾಡಲು ಅವಕಾಶ ನೀಡಲಾಗಿದ್ದು ಪ್ರತಿಯೊಬ್ಬರು ವಸತಿಗೃಹಗಳನ್ನು ಮುಂಗಡವಾಗಿಯೇ ಬುಕ್ ಮಾಡಿಕೊಳ್ಳಬಹುದು ಇದರಿಂದ ಸಮಯ ಉಳಿತಾಯವಾಗಲಿದೆ, ಉಳಿದಂತೆ ಶೇ 30ರಷ್ಟು ಮಾಹಿತಿ ಕೇಂದ್ರಕ್ಕೆ ತೆರಳಿ ವಸತಿಗೃಹಗಳನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದ ಜೇನುಮಲೆ, ಶಿವ ದರ್ಶಿನಿ, ಸೂರ್ಯ ದರ್ಶಿನಿ, ಶೈಲ ಭವನ, ಗುರುದರ್ಶಿನಿ, ಮಹದೇಶ್ವರ ಭವನ, ಯಾತ್ರಿ ನಿವಾಸ, ಡಾರ್ಮೆಟರಿ, ನಾಗಮಲೆ ಭವನಗಳಲ್ಲಿ https://mmhillsresevation.com ವೆಬ್ ಸೆಟ್ ಮುಖಾಂತರ ಮುಂಗಡ ಬುಕಿಂಗ್ ಮಾಡಿಕೊಳ್ಳಬಹುದು ಎಂದು ಕಾರ್ಯದರ್ಶಿ ಎಈ ರಘು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago