ಹನೂರು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹನೂರು ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ನಡೆಯಿತು.
ಮ.ಬೆಟ್ಟದ ದೇವಾಲಯ ಪಕ್ಕದ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಗಡಿನಾಡ ಸಾಂಸ್ಕ ತಿಕ ಉತ್ಸವ ಕಾರ್ಯಕ್ರಮವು ಶಾಸಕರಾದ ಎಂ.ಆರ್.ಮಂಜುನಾಥ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿದ್ದ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಚನಾ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್ ಮತ್ತೀಹಳ್ಳಿ ಭಾಗವಹಿಸಿದ್ದರು.
ತಹಸಿಲ್ದಾರ್ ಕೆ.ಎನ್.ಚೈತ್ರಾ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ. ರಘು, ಕನ್ನಡ ಸಾಹಿತ್ಯ ಪರಿಷತ ತಾಲ್ಲೂಕು ಅಧ್ಯಕ್ಷರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯವರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗಡಿ ಪ್ರಾಧಿಕಾರದ ಅನುದಾನದಲ್ಲಿ ನೀಡಲ್ಪಟ್ಟಿರುವ ಹನೂರು ತಾಲ್ಲೂಕಿನ ಕೊಂಬುಡಿಕ್ಕಿ ಗ್ರಾಮದ ಸರ್ಕಾರಿ ಶಾಲೆಯ ಸ್ಮಾರ್ಟ್ ಬೋರ್ಡ್ ಪ್ಯಾನೆಲ್‌ಅನ್ನು ವೀಕ್ಷಣೆ ಮಾಡಲಾಯಿತು.





