ಚಾಮರಾಜನಗರ

ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂ: ಮಾಜಿ ಸಚಿವ ಎನ್.ಮಹೇಶ್ ಭೇಟಿ, ಸಾಂತ್ವನ

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಗ್ರಾಮದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಮನೆಯ ಮೇಲ್ಛಾವಣಿಯ ಹೆಂಚುಗಳು ಹಾರಿ ಹೋಗಿ ಮನೆ ಸಂಪೂರ್ಣ ಜಖಂಗೊಂಡಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎನ್.ಮಹೇಶ್ ಅವರು ಹಾನಿಗೊಳಗಾದ ಮನೆಯನ್ನು ಪರಿಶೀಲಿಸಿದರು.

ಈ ವೇಳೆ ಕುಟುಂಬಸ್ಥರ ಅಳಲು ಆಲಿಸಿದ ಅವರು, ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.

ಬೂದಂಬಳ್ಳಿ ಸುತ್ತಮುತ್ತ ಗಾಳಿ ಮಳೆಗೆ ಹಲವು ಮನೆಗಳು ಹಾನಿಗೀಡಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಷ್ಯಾದಲ್ಲಿ ಪ್ಲೇಗ್ ಪತ್ತೆಯಾಗಿಲ್ಲ: WHO ಸ್ಪಷ್ಟನೆ!

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…

3 hours ago

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್!

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…

3 hours ago

ಮೈಸೂರು ದಸರಾ: ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…

4 hours ago

ಓದುಗರ ಪತ್ರ: ‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ

‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…

4 hours ago

ಓದುಗರ ಪತ್ರ: ನೀಲಿಯೆಂದರೇನು?!

ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…

4 hours ago

ಓದುಗರ ಪತ್ರ: ಬಾಪುವನ್ನು ಹುಡುಕುತ್ತಾ…

ಮಸೂರ ಬದಲಿಸಿ ಬಾಪುವ ಹುಡುಕಿದೆ ಅಂದಗೆಟ್ಟ ವುಡ್ಲ್ಯಾಂಡ್ ಶೂ, ಹರಿದ ಜೀನ್ಸ್, ಮಾಸಿದ ಟಿ-ಶರ್ಟಿನಲಿ ಕಸ ಆಯುತಿದ್ದನವನು ತಿರುವಿನಲಿ. ರಚ್ಚೆ…

4 hours ago